ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ ಗೈರು

ನಾಳೆ ನಡೆಯಲಿರುವ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸೇರಿದಂತೆ ವಿವಿಧ ಪ್ರತಿಪಕ್ಷಗಳ ಮುಖಂಡರು ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿತ್ತು.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಂತೆಯೇ ರಾಜ್ಯದಲ್ಲಿ ಭರ್ಜರಿ ಜಯ ಭೇರಿ ಕಾಂಗ್ರೆಸ್ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿಯೂ ಕಾರ್ಯತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ನಾಳೆ ನಡೆಯಲಿರುವ 
ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸೇರಿದಂತೆ ವಿವಿಧ ಪ್ರತಿಪಕ್ಷಗಳ ಮುಖಂಡರು ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿತ್ತು.

ಆದರೆ,  ಈ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಆಗಮಿಸುತ್ತಿಲ್ಲ. ಅವರ ಬದಲಿಗೆ  ಪಕ್ಷದ ನಾಯಕ ಕಾಕೋಲಿ ಘೋಷ್ ದಸ್ತಿದಾರ್ ಆಗಮಿಸುತ್ತಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯಸಭಾ ಪಕ್ಷದ ನಾಯಕ ಡೆರೆಕ್ ಓ ಬ್ರಿಯಾನ್, ಕರ್ನಾಟಕದ ನಿಯೋಜಿತ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಹೋದ್ಯೋಗಿಗಳ ಪ್ರಮಾಣ ವಚನ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರೇ ವೈಯಕ್ತಿಕವಾಗಿ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾಸಿದ್ದರು. ಆದರೆ, ಅವರ ಪರವಾಗಿ ಲೋಕಸಭೆಯಲ್ಲಿನ ಟಿಎಂಸಿ ಉಪ ನಾಯಕ ಕಾಕೊಲಿ ಘೋಷ್ ದಸ್ತಿದಾರ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಟಿಎಂಸಿ ಮುಖ್ಯಸ್ಥರ ಉಪಸ್ಥಿತಿ ಪ್ರತಿಪಕ್ಷಗಳ ಒಗ್ಗಟ್ಟಿಗೆ ನಿರ್ಣಾಯಕವೆಂದು ಪರಿಗಣಿಸಲಾಗಿತ್ತು. ಅದರಲ್ಲೂ ವಿಶೇಷವಾಗಿ 2024 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಬಲವಾಗಿರುವ ಕಡೆಗಳಲ್ಲಿ ಆ ಪಕ್ಷವನ್ನು ಬೆಂಬಲಿಸುವುದಾಗಿ ಮಮತಾ ಇತ್ತೀಚಿಗೆ ಹೇಳಿಕೆ ನೀಡಿದ್ದರು.

ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರಬಲ ಗೆಲುವು ಸಾಧಿಸಿದ ಬೆನ್ನಲ್ಲೇ ಅವರ ಹೇಳಿಕೆ ಹೊರಬಿದ್ದಿತ್ತು.  224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದರೆ, ಆಡಳಿತಾರೂಢ ಬಿಜೆಪಿ 66 ಸ್ಥಾನಗಳನ್ನು ಪಡೆದುಕೊಂಡಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com