ನಾಳೆ ಸಿಇಟಿ ಪರೀಕ್ಷೆ ದಿನವೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಭೀತಿ, ಪೊಲೀಸರಿಂದ ಕ್ರಮ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಿಇಟಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನವೇ 12.30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ (Traffic Problems) ಭೀತಿ ಶುರುವಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಿಇಟಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನವೇ 12.30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ (Traffic Problems) ಭೀತಿ ಶುರುವಾಗಿದೆ. 

ಯಾವುದೇ ಸಮಸ್ಯೆಗಳು ನಡೆಯದಂತೆ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದೇವೆ. ಕಂಠೀರವ ಕ್ರೀಡಾಂಗಣ ಸುತ್ತ ಮುತ್ತ ಇರುವ ಪರೀಕ್ಷಾ ಕೇಂದ್ರಗಳ ವಿವರಗಳನ್ನು ವೆಬ್ ಸೈಟ್ ನಲ್ಲಿ ಹಾಕುತ್ತೇವೆ.ಕ್ರೀಡಾಂಗಣ ಸುತ್ತಮುತ್ತ ವಿಧ್ಯಾರ್ಥಿಗಳು ಎರಡು ಗಂಟೆಗೂ ಮೊದಲೇ ಬರಬೇಕು ಎಂದು ರಮ್ಯಾ ತಿಳಿಸಿದ್ದಾರೆ.

ಈ ಮಧ್ಯೆ, ಪ್ರಮಾಣ ವಚನ ಸಮಾರಂಭದಿಂದ ಸಿಇಟಿ ವಿದ್ಯಾರ್ಥಿಗಳಿಗೆ ಸಂಚಾರ ದಟ್ಟಣೆಯ ಸಮಸ್ಯೆಯಾಗಲಿದೆಯಾ ಎಂಬ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಪತ್ರ ಬರೆದು ಸಲಹೆ ಕೇಳಿದೆ. ಸಮಾರಂಭಕ್ಕೆ ಎಷ್ಟು ಜನ ಬರಬಹುದು. ಯಾವ್ಯಾವ ಭಾಗದಲ್ಲಿ ಸಮಸ್ಯೆ ಆಗಬಹುದು ಎಂಬ ಮಾಹಿತಿಯನ್ನು ಪೊಲೀಸರು ನೀಡಿದರೆ ಇದನ್ನು ಸರ್ಕಾರದ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಯಾವ ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸಲು ಸಾಧ್ಯವಾಗುತ್ತದೆ ಎಂದು ನಿನ್ನೆ ಪತ್ರ ಬರೆದಿತ್ತು.

ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೇಳೆ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com