PUC ಮರು ಮೌಲ್ಯಮಾಪನ: ತಬಸುಮ್ ಶೇಖ್ ಹಿಂದಿಕ್ಕಿ ವಿಶೇಷ ಚೇತನ ವಿದ್ಯಾರ್ಥಿ ಕುಶಾಲ್ ನಾಯ್ಕ್ ರಾಜ್ಯಕ್ಕೆ ಪ್ರಥಮ
ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶಾಲ್ ನಾಯ್ಕ್ ಪಿಯುಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
Published: 19th May 2023 03:34 PM | Last Updated: 19th May 2023 08:05 PM | A+A A-

ಕುಶಾಲ್ ನಾಯ್ಕ್
ಬೆಂಗಳೂರು: ಕಲಾ ವಿಭಾಗದಲ್ಲಿ ವಿದ್ಯಾರ್ಥಿ ಕುಶಾಲ್ ನಾಯ್ಕ್ ಪಿಯುಸಿ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾನೆ.
ಆ ಮೂಲಕ ಬೆಂಗಳೂರಿನ ಜಯನಗರ ಕಾಲೇಜಿನ ವಿದ್ಯಾರ್ಥಿನಿ ತಬಸುಮ್ ಶೇಖ್ನನ್ನು ಹಿಂದಿಕ್ಕಿದ್ದಾನೆ. ತಬಸುಮ್ ಶೇಖ್ 593 ಅಂಕ ಪಡೆದು ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಆದರೆ ಮರು ಮೌಲ್ಯಮಾಪನದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ವಿಶೇಷ ಚೇತನ ವಿದ್ಯಾರ್ಥಿ ಕುಶಾಲ್ ನಾಯ್ಕ್ ದ್ವಿತೀಯ ಪಿಯುಸಿನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಕುಶ್ ನಾಯ್ಕ್ ಮೌಲ್ಯಮಾಪನ ಫಲಿತಾಂಶದಲ್ಲಿ ಕಲಾ ವಿಭಾಗದ ಐಚ್ಚಿಕ ಕನ್ನಡ ವಿಷಯದಲ್ಲಿ 592 ಅಂಕಗಳಿಂದ 594 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ರ್ಯಾಂಕ್ ಬಂದಿದ್ದಾರೆ.
ಇದನ್ನೂ ಓದಿ: 'ಹಿಜಾಬ್ ಧರಿಸಿಕೊಂಡು ಸಾಧಿಸಲು ಬಯಸಿದ್ದೆ': ದ್ವಿತೀಯ ಪಿಯುಸಿ ಕಲಾ ವಿಭಾಗದ ಟಾಪರ್ ತಬಸ್ಸುಮ್
ಇಂದು ಪಿಯು ಕಾಲೇಜಿನ ಮತ್ತೋರ್ವ ವಿದ್ಯಾರ್ಥಿ ಕೃಷ್ಣ ಒಟ್ಟು 593 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ದ್ವೀತಿಯ ಸ್ಥಾನ ಪಡೆದುಕೊಂಡಿದ್ದಾನೆ. ಈ ಮೂಲಕ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜು ಸತತ ಎಂಟನೇ ಬಾರಿಗೆ ಪ್ರಥಮ ಸ್ಥಾನ ಪಡೆದಿದೆ.