ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜ್ಯಪಾಲರ ಭೇಟಿ, ಸರ್ಕಾರ ರಚನೆಗೆ  ಹಕ್ಕು ಮಂಡನೆ; ಮೇ 20ಕ್ಕೆ ಪದಗ್ರಹಣ

ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ
ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ

ಬೆಂಗಳೂರು: ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.
 
ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ಪ್ರಮಾಣವಚನ ಸ್ವೀಕಾರಕ್ಕೆ ರಾಜ್ಯಪಾಲರು ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ಮೇ.20 ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಇದಕ್ಕೂ ಮುನ್ನ, ರಾತ್ರಿ ಕೆಪಿಸಿಸಿ ಕಚೇರಿ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು.

ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಕಾರ್ಯಕ್ರಮವನ್ನು ಸಮಾವೇಶದ ಮಾದರಿಯಲ್ಲಿ ನಡೆಸಲು ಯೋಜಿಸಲಾಗಿದೆ. ರಾಜ್ಯಪಾಲರು ಪದಗ್ರಹಣ ಕಾರ್ಯಕ್ರಮ ಮುಕ್ತಾಯಗೊಳಿಸಿ ತೆರಳಿದ ಬಳಿಕ ಸಮಾವೇಶ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ರಾಜ್ಯಪಾಲರ ಭೇಟಿಗೂ ಮುನ್ನ ಸಿಎಲ್ ಪಿ ನಾಯಕರ ಆಯ್ಕೆ ಬಳಿಕ ಮಾತನಾಡಿದ ಸಿದ್ದರಾಮಯ್ಯ,  5 ಯೋಜನೆ ವಿಚಾರದಲ್ಲಿ ಗೊಂದಲ ಬೇಡ, ನನ್ನ ಮೇಲೆ ವಿಶ್ವಾಸವಿಟ್ಟಿದ್ದೀರಿ ನಂಬಿಕೆ ಉಳಿಸಿಕೊಳ್ಳುವೆ ಭರವಸೆ ಈಡೇಸುತ್ತೇನೆ  ಎಲ್ಲರೂ ಸಹಕರಿಸಿ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com