ಹಿಂದಿನ ಸರ್ಕಾರ 'ಯೂಸ್ ಲೆಸ್', ಕೇಂದ್ರದಿಂದ ನಮ್ಮ ತೆರಿಗೆ ಪಾಲನ್ನು ಸರಿಯಾಗಿ ಪಡೆಯಲಿಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಕೇಂದ್ರ ಸರ್ಕಾರದಿಂದ ನಮ್ಮ ಪಾಲಿನ ತೆರಿಗೆ ಪಾಲನ್ನು ಸರಿಯಾಗಿ ಪಡೆಯದ ಹಿಂದಿನ ಬಿಜೆಪಿ ಸರ್ಕಾರ 'ಯೂಸ್ ಲೆಸ್' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಸುದ್ದಿಗೋಷ್ಠಿ

ಬೆಂಗಳೂರು: ಕೇಂದ್ರ ಸರ್ಕಾರದಿಂದ ನಮ್ಮ ಪಾಲಿನ ತೆರಿಗೆ ಪಾಲನ್ನು ಸರಿಯಾಗಿ ಪಡೆಯದ ಹಿಂದಿನ ಬಿಜೆಪಿ ಸರ್ಕಾರ 'ಯೂಸ್ ಲೆಸ್' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಮೊದಲ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರ ಸರ್ಕಾರ ನಮಗೆ 5,495 ಕೋಟಿ ರೂ. ಕೊಡಬೇಕಿತ್ತು. ಆದರೆ ಹಿಂದಿನ ರಾಜ್ಯ ಸರ್ಕಾರ ಅದನ್ನು ಪಡೆಯಲಿಲ್ಲ. ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಅವರು ಹಾಗೂ ಪ್ರಧಾನಿ ನರೇಂದ್ರ ಮೋದಿಯ ಕಾರಣದಿಂದಾಗಿ ಕರ್ನಾಟಕಕ್ಕೆ ನಷ್ಟವಾಯಿತು ಎಂದರು. 

ಜಿಎಸ್ ಟಿ ಮೂಲಕ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ಹೋಗುತ್ತಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ಬಸವರಾಜ ಬೊಮ್ಮಾಯಿ ಜಿಎಸ್ ಟಿ ಕೌನ್ಸಿಲ್ ಸದಸ್ಯರಾಗಿದ್ದರೂ ನಮ್ಮ ತೆರಿಗೆ ಪಾಲನ್ನು ಸರಿಯಾಗಿ ಪಡೆಯಲಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. 

ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ನಮ್ಮ ರಾಜ್ಯದ ಬಜೆಟ್​ ಗಾತ್ರ 3.10 ಲಕ್ಷ ಕೋಟಿ ರೂ. ಇದೆ. ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರಬೇಕಿದೆ.ಜೊತೆಗೆ ಕಟ್ಟು ನಿಟ್ಟಾದ ತೆರಿಗೆ ಸಂಗ್ರಹ ಮೂಲಕ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com