ಬೆಂಗಳೂರಿನಲ್ಲಿ ಕಂಗೊಳಿಸುತ್ತಿವೆ ಗಾಂಧಿ ಕುಟುಂಬ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಪೋಸ್ಟರ್‌ಗಳು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬೆಂಗಳೂರಿನಲ್ಲಿ ಗಾಂಧಿ ಕುಟುಂಬ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇರುವ ಪೋಸ್ಟರ್‌ಗಳನ್ನು ಎಲ್ಲೆಡೆ ಹಾಕಲಾಗಿದೆ.
ಕಂಠೀರವ ಸ್ಟೇಡಿಯಂ ಸಮೀಪ ರಾರಾಜಿಸುತ್ತಿರುವ ಕಾಂಗ್ರೆಸ್ ನಾಯಕರ ಪೋಸ್ಟರ್‌ಗಳು
ಕಂಠೀರವ ಸ್ಟೇಡಿಯಂ ಸಮೀಪ ರಾರಾಜಿಸುತ್ತಿರುವ ಕಾಂಗ್ರೆಸ್ ನಾಯಕರ ಪೋಸ್ಟರ್‌ಗಳು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಬೆಂಗಳೂರಿನಲ್ಲಿ ಗಾಂಧಿ ಕುಟುಂಬ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇರುವ ಪೋಸ್ಟರ್‌ಗಳನ್ನು ಎಲ್ಲೆಡೆ ಹಾಕಲಾಗಿದೆ.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಪಕ್ಷದ ಹಾಲಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ನಾಯಕರ ಪೋಸ್ಟರ್‌ಗಳು ಸಹ ಕಂಡುಬಂದವು.

ಕಾಂಗ್ರೆಸ್ ಹಿರಿಯ ನಾಯಕ ಸಿದ್ಧರಾಮಯ್ಯ ಅವರು ಶನಿವಾರ ಮಧ್ಯಾಹ್ನ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ರ ಸುಮಾರಿಗೆ ನಡೆಯಲಿರುವ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಸಿಎಂ ಮತ್ತು ಅವರ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಖರ್ಗೆ ತಿಳಿಸಿದರು.

ಕಾಂಗ್ರೆಸ್ ಶಾಸಕರಾದ ಡಾ.ಜಿ. ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ಮತ್ತು ಬಿ.ಝಡ್. ಜಮೀರ್ ಅಹಮದ್ ಖಾನ್ ಅವರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

ಇಂದು ಸಿಎಂ, ಉಪಮುಖ್ಯಮಂತ್ರಿ ಹಾಗೂ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಎಂಟು ಶಾಸಕರು ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ನಾನು ಹೋಗುತ್ತಿದ್ದೇನೆ. ಕರ್ನಾಟಕದಲ್ಲಿ ಹೊಸ ಹಾಗೂ ಬಲಿಷ್ಠ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಂತಸದ ಸಂಗತಿ. ಇದರಿಂದ ಕರ್ನಾಟಕಕ್ಕೆ ಅನುಕೂಲವಾಗಲಿದೆ ಮತ್ತು ದೇಶದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಕರ್ನಾಟಕಕ್ಕೆ ತೆರಳುವ ಮುನ್ನ ಎಎನ್‌ಐ ಜತೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಮಾನ ಮನಸ್ಕ ಪಕ್ಷಗಳ ಹಲವು ನಾಯಕರನ್ನು ಕಾಂಗ್ರೆಸ್ ಆಹ್ವಾನಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com