
ಬೆಂಗಳೂರು: ನುಡಿದಂತೆ ನಡೆಯುತ್ತೇವೆ, ಇಂದು ನಡೆಯುವ ಮೊದಲ ಸಂಪುಟ ಸಭೆಯಲ್ಲೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆಂದು ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಸಿದ್ದರಾಮಯ್ಯ ಅವರು ಮಾತನಾಡಿದರು.
ಕರ್ನಾಟಕದ ಜನರ ಆಶೀರ್ವಾದಿಂದ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಸೇರಿ ಅನೇಕರು ರಾಜ್ಯದಲ್ಲಿ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದ. ಸಾಹಿತಿಗಳು, ಚಿಂತಕರು, ಸಂಘಟನೆಗಳಿಗೂ ಧನ್ಯವಾದ ಹೇಳುತ್ತೇನೆಂದು ಹೇಳಿದರು.
ವಿವಿಧ ರಾಜ್ಯಗಳ ನಾಯಕರು ನಮಗೆ ಶುಭ ಹಾರೈಸಲು ಬಂದಿದ್ದರು. ರಾಜ್ಯದ ಜನರ ನಿರೀಕ್ಷೆಗೆ ತಕ್ಕಂತೆ ನಾವು ಆಡಳಿತ ನಡೆಸುತ್ತೇವೆ. ಇಂದೇ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಕರ್ನಾಟಕದ ಜನರಿಗೆ ನಾವು ನೀಡಿದ ಭರವಸೆ ಈಡೇರಿಸುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ತಿಳಿಸಿದರು.
Advertisement