ಬೆಂಗಳೂರಿನಲ್ಲಿ ಮಳೆ ಬಂದರೆ ಜನ ಸಾಯಲೇಬೇಕೆ?: ಬಿಬಿಎಂಪಿ ವಿರುದ್ಧ ಕುಮಾರಸ್ವಾಮಿ ಕಿಡಿ

ಬೆಂಗಳೂರಿನಲ್ಲಿ ಪ್ರತಿ ಸಲ ಮಳೆ ಬಂದಾಗ ಅವಾಂತರ ಸೃಷ್ಟಿಯಾಗಿ, ಜನ ಪ್ರಾಣ ಕಳೆದುಕೊಂಡ ನಂತರವೇ ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತದೆ. ಮಳೆ ಬಂದರೆ ಜನ ಸಾಯಲೇಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ....
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿ ಸಲ ಮಳೆ ಬಂದಾಗ ಅವಾಂತರ ಸೃಷ್ಟಿಯಾಗಿ, ಜನ ಪ್ರಾಣ ಕಳೆದುಕೊಂಡ ನಂತರವೇ ಬಿಬಿಎಂಪಿ ಎಚ್ಚೆತ್ತುಕೊಳ್ಳುತ್ತದೆ. ಮಳೆ ಬಂದರೆ ಜನ ಸಾಯಲೇಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಡರ್ ಪಾಸ್ ಗಳಲ್ಲಿ ಕಸಕಡ್ಡಿ ತೆಗೆದು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಾಗಿದ್ದ ಪಾಲಿಕೆ, ಮೈಮರೆತು ಕರ್ತವ್ಯಲೋಪ ಎಸಗಿದೆ. ಪ್ರತೀಸಲವೂ ಮಳೆ ಬಂದಾಗ ಅವಾಂತರ, ಪ್ರಾಣಹಾನಿ ಸಂಭವಿಸಿದ ಮೇಲೆ ಪಾಲಿಕೆ ಎಚ್ಚೆತ್ತುಕೊಳ್ಳುತ್ತದೆ, ಯಾಕೆ? ಮಳೆ ಬಂದರೆ ಜನರು ಸಾಯಲೇಬೇಕೆ? ಎಂದು ಮಾಜಿ ಸಿಎಂ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು ಸುರಿದ ಭಾರೀ ಮಳೆಯಿಂದ ಕೆ.ಆರ್.ವೃತ್ತದ ಅಂಡರ್ ಪಾಸ್ ನಲ್ಲಿ ಮಳೆನೀರಿಗೆ ಸಿಲುಕಿ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಎಂಬ ಯುವತಿ ಸಾವನ್ನಪ್ಪಿರುವ ಸುದ್ದಿ ತಿಳಿದು ತೀವ್ರ ಆಘಾತವಾಯಿತು. ಮಳೆಯ ಮುನ್ನೆಚ್ಚರಿಕೆ ಇದ್ದರೂ ಬಿಬಿಎಂಪಿ ಆಡಳಿತ ಎಚ್ಚೆತ್ತುಕೊಳ್ಳದೇ ಇರುವುದು ನಿರ್ಲಕ್ಷ್ಯದ ಪರಮಾವಧಿ ಎಂದು ಮತ್ತೊಂದು ಟ್ವೀಟ್ ನಲ್ಲಿ ಕಿಡಿಕಾರಿದ್ದಾರೆ.

ಭಾರೀ ಮಳೆ ಸುರಿಯುತ್ತಿದ್ದ ಅಪಾಯದ ಸಮಯದಲ್ಲಿ ವಾಹನ ಚಾಲಕರು ಅತ್ಯಂತ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು. ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದ್ದನ್ನು ಕಂಡ ಮೇಲೂ ಚಾಲಕ ಕಾರನ್ನು ಅಂಡರ್ ಪಾಸ್ ಮೂಲಕ ಚಾಲನೆ ಮಾಡಬಾರದಿತ್ತು. ಸಂಚಾರಿ ಪೊಲೀಸರು ಮೊದಲೇ ಮುನ್ನೆಚ್ಚರಿಕೆ ನೀಡಬೇಕಿತ್ತು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com