ಮೊಮ್ಮಗನ ಗ್ರಾಜುಯೇಷನ್ ಡೇ ಸಮಾರಂಭಕ್ಕೆ ಬಂದು ಅಚ್ಚರಿ ಮೂಡಿಸಿದ ಸಿಎಂ ಸಿದ್ದರಾಮಯ್ಯ!

ನಗರದ ಕೆನಡಿಯನ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಭಾನುವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊ೦ಡು 12ನೇ ತರಗತಿ ಪೂರ್ಣಗೊಳಿಸಿದ ಮೊಮ್ಮಗ ಧವನ್‌ಗೆ ತಾವೇ ಪ್ರಮಾಣಪತ್ರ ನೀಡಿದರು.
ಸಮಾರಂಭದಲ್ಲಿ ಸಿದ್ದರಾಮಯ್ಯ
ಸಮಾರಂಭದಲ್ಲಿ ಸಿದ್ದರಾಮಯ್ಯ

ಬೆಂಗಳೂರು: ನಗರದ ಕೆನಡಿಯನ್‌ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಭಾನುವಾರ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊ೦ಡು 12ನೇ ತರಗತಿ ಪೂರ್ಣಗೊಳಿಸಿದ ಮೊಮ್ಮಗ ಧವನ್‌ಗೆ ತಾವೇ ಪ್ರಮಾಣಪತ್ರ ನೀಡಿದರು.

ಪದವಿ ಪಡೆದ 68 ವಿದ್ಯಾರ್ಥಿಗಳಲ್ಲಿ ಅವರ ಮೊಮ್ಮಗ ಧವನ್ ರಾಕೇಶ್ ಕೂಡ ಒಬ್ಬರು. ಈ ವೇಳೆ ಧವನ್​​ ​ಗೌನ್​​ ಮೇಲೆ ಕನ್ನಡ ಧ್ವಜವನ್ನು ಹಾಕಿಕೊಂಡಿದ್ದು ವಿಶೇಷವಾಗಿತ್ತು.

ಈ ಬಗ್ಗೆ ಟ್ವೀಟ್​ ಮಾಡಿದ ಸಿದ್ದರಾಮಯ್ಯ ಅವರು “ನನ್ನ ಮೊಮ್ಮಗ ಕೆನಡಿಯನ್​​ ಇಂಟರ್​​ ನ್ಯಾಶನಲ್​ ಶಾಲೆಯಲ್ಲಿ 12 ನೇ ತರಗತಿ ಪೂರ್ಣಗೊಳಿಸಿದ್ದಾನೆ. ಪದವಿ ತರಗತಿಗೆ ತೆರಳುತ್ತಿರುವ ವಿದ್ಯಾರ್ಥಿಗಳಿಗಾಗಿ ಶಾಲೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಿತ್ತು. ಈ ಸಮಾರಂಭದ ಭಾಗವಾಗಲು ನನಗೆ ಸಂತೋಷವಾಗಿದೆ” ಎಂದು ಟ್ವೀಟ್​ ಮಾಡಿದ್ದಾರೆ.

ಧವನ್ ಸಿದ್ದರಾಮಯ್ಯ ಪುತ್ರ ರಾಕೇಶ್ ಅವರ ಮಗ,  2016 ರಲ್ಲಿ ಸಿದ್ದು ಪುತ್ರ ರಾಕೇಶ್ ಅಕಾಲಿಕ ಮರಣಕ್ಕೀಡಾಗಿದ್ದರು. ಸದ್ಯ ಧವನ್ ರಾಕೇಶ್ ಅವರನ್ನು ಸಿದ್ದರಾಮಯ್ಯ ಅವರ ಮುದಿನ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಾತನ ಪರ ವರುಣಾ ಕ್ಷೇತ್ರದಲ್ಲಿ ಧವನ್ ಪ್ರಚಾರ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com