ವಿಧಾನಸಭೆ ಅಧಿವೇಶನ: ವಿಧಾನಸೌಧ ಮುಂಭಾಗ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು

ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು.
ವಿಧಾನಸೌಧದ ಮುಂಭಾಗ ಗೋಮೂತ್ರ ಸಿಂಪಡಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು.
ವಿಧಾನಸೌಧದ ಮುಂಭಾಗ ಗೋಮೂತ್ರ ಸಿಂಪಡಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು.

ಬೆಂಗಳೂರು: ಮೂರು ದಿನಗಳ ಕಾಲ ವಿಧಾನಸಭೆ ವಿಶೇಷ ಅಧಿವೇಶನ ಸೋಮವಾರ ಆರಂಭವಾಗಿದ್ದು, ಅಧಿವೇಶನ ಆರಂಭವಾಗುವುದಕ್ಕೂ ಮುನ್ನ ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಪೂಜೆ ಸಲ್ಲಿಸಿದರು.

ಪ್ರವೇಶ ದ್ವಾರ ಹಾಗೂ ಹೊರ ಆವರಣದಲ್ಲಿ ಗೋಮೂತ್ರ ಸಿಂಪಡಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಶುದ್ಧೀಕರಣ ನಡೆಸಿದರು. ಬಳಿಕ ವೈದಿಕರ ಮೂಲಕ ಪೂಜೆ ನೆರವೇರಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್ ಅವರು, ಹಿಂದಿನ ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯದಿಂದ ತೊಲಗಿ ಶುದ್ಧ ಆಡಳಿತ ನಡೆಸಲು ಕಾಂಗ್ರೆಸ್ ಪಕ್ಷಕ್ಕೆ ಜನ ಸ್ಪಷ್ಟ ಬಹುಮತ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆಯ ಒಳಿತಿಗಾಗಿ ಶಕ್ತಿ ಕೇಂದ್ರ ವಿಧಾನಸೌಧದ ಮುಂಭಾಗದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com