ಖಾತೆ ಹಂಚಿಕೆಗೂ ಮುನ್ನ ಪೊಲೀಸರಿಗೆ ನಿರ್ದೇಶನ: ಗೃಹ ಇಲಾಖೆ ಮೇಲೆ ಪ್ರಿಯಾಂಕ್‌ ಖರ್ಗೆ ಕಣ್ಣು!

ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವಿಗೆ ಕಾಂಗ್ರೆಸ್‌ ಪಕ್ಷ ಕೊಟ್ಟಂತಹ ಐದು ಗ್ಯಾರಂಟಿ ಘೋಷಣೆಗಳು ಸಹ ಪ್ರಮುಖವಾಗಿದದ್ದು, ಸರ್ಕಾರ ರಚನೆಯ ಬಳಿಕ ಪಿ ಎಸ್‌ ಐ ಹಾಗೂ ಬಿಟ್‌ ಕಾಯಿನ್‌ ಹಗರಣಗಳಿಗೆ ತಾರ್ಕಿಕ ಅಂತ್ಯದೆಡೆಗೆ ತೆಗೆದುಕೊಂಡು ಹೋಗುವುದೇ ನಮ್ಮ ಆರನೇ ಗ್ಯಾರಂಟಿ ಎಂದು ನೂತನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಹಗರಣಗಳ ಆರೋಪಿಗಳಿಗೆ ಶಿಕ್ಷೆ ನೀಡಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದು, ಈಗಾಗಲೇ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳಿಗೆ ನಿಬಂಧನೆಗಳು ಅನ್ವಯಿಸಲಿವೆ. ಯಾವುದೇ ಸರ್ಕಾರ ಯೋಜನೆಗಳನ್ನ ಜಾರಿಗೊಳಿಸಿದರೇ ಷರತ್ತುಗಳಿಲ್ಲದೆ ಜಾರಿಗೊಳಿಸಲು ಸಾಧ್ಯವಾ? ಎಂದು ಪ್ರಶ್ನಿಸಿದ್ದಾರೆ.

ಬಿಟ್‌ಕಾಯಿನ್ ಹಗರಣದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. 2021ರ ನವೆಂಬರ್‌ನಲ್ಲಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಿದ ನಂತರ ದೊಡ್ಡ ನಾಯಕರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಖರ್ಗೆ ಗಂಭೀರ ಆರೋಪ ಮಾಡಿದ್ದರು.

ಆರೋಪಿ ಶ್ರೀಕಿ 10 ಪೋಕರ್ ವೆಬ್‌ಸೈಟ್‌ಗಳು ಸೇರಿದಂತೆ 3 ಬಿಟ್‌ಕಾಯಿನ್ ಎಕ್ಸ್‌ಚೇಂಜ್‌ಗಳನ್ನು 14 ವೆಬ್‌ಸೈಟ್‌ಗಳಿಗೆ ಹ್ಯಾಕ್ ಮಾಡಿದ್ದಾನೆ ಮತ್ತು ಮಾಲ್‌ವೇರ್‌ಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ಇದರ ಒಟ್ಟು ಮೊತ್ತವನ್ನು ಬಹಿರಂಗಪಡಿಸಲಾಗಿಲ್ಲ ಆದರೆ ಸುಮಾರು 2283 ಕೋಟಿ ಎಂದು ಊಹಿಸಲಾಗಿದೆ.

ಪೊಲೀಸ್ ಠಾಣೆಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಂತೆ ಟಾಸ್ಕ್ ನೀಡಲಾಗಿದ್ದು ಅಕ್ರಮ ಜೂಜು ಮತ್ತು ಬೆಟ್ಟಿಂಗ್ ದಂಧೆಗೆ ಬ್ರೇಕ್ ಹಾಕಲು ಸೂಚನೆ ನೀಡಿದ್ದಾರೆ. ಚಿತ್ತಾಪುರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ, ರೌಡಿಶೀಟರ್ ಮಣಿಕಂಠ ರಾಠೋಡ್ ವಿರುದ್ಧ ಪರೋಕ್ಷವಾಗಿ ಆದೇಶ ನೀಡಿದ್ದು ರೌಡಿಗಳು ಮತ್ತು ದ್ವೇಷಭಾಷಣ ಮಾಡುವವರನ್ನ ನಿಯಂತ್ರಿಸುವಂತೆ ಸೂಚನೆ ನೀಡಿದ್ದಾರೆ. ಇನ್ನು ಸಾರ್ವಜನಿಕರಿಗೆ ಅನಗತ್ಯವಾಗಿ ಪೊಲೀಸರು ಕಿರುಕುಳ ನೀಡುವುದನ್ನ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ, ರೌಡಿಗಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸುವಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದರು. ಇದು ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಒಂದು ಮಟ್ಟಿಗೆ ಹೋಗಲಾಡಿಸಲು ಸಹಾಯ ಮಾಡುತ್ತದೆ ಮತ್ತು ಸಂಬಂಧಪಟ್ಟ ಎಲ್ಲಾ ಇಲಾಖೆಗಳು ನೇಮಕಾತಿ ಪ್ರಕ್ರಿಯೆಯನ್ನು ತೆಗೆದುಕೊಳ್ಳುತ್ತವೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com