ಝೀರೋ ಟ್ರಾಫಿಕ್ ಜೊತೆಗೆ ಹಾರ-ತುರಾಯಿ, ಶಾಲಿನ ಸನ್ಮಾನವೂ ಬೇಡವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ ಎಂದಿದ್ದಾರೆ.

ಮುಂದುವರಿದು, ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಅವರು, ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಮುಖ್ಯಮಂತ್ರಿ ವಾಹನ ಸಂಚಾರಕ್ಕೆ ನೀಡಿರುವ ಝೀರೋ ಟ್ರಾಫಿಕ್‌ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದರು.

ಸಿದ್ದರಾಮಯ್ಯ ಅವರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹಲವರು ಉತ್ತಮ ನಿರ್ಧಾರ ಎಂದು ಶ್ವಾಘಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com