RCB vs GT: ಏನೇ ಆದ್ರು ಆರ್‌ಸಿಬಿ ನನ್ನ ಫೇವರಿಟ್, ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ; ಡಿಕೆ ಶಿವಕುಮಾರ್
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 6 ವಿಕೆಟ್‌ಗಳ ಸೋಲು ಕಂಡಿದ್ದು, ಈ ಮೂಲಕ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದೆ.
Published: 22nd May 2023 10:56 AM | Last Updated: 22nd May 2023 03:33 PM | A+A A-

ತಮ್ಮ ಪುತ್ರಿ ಹಾಗೂ ಪುತ್ರನೊಂದಿಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯ ವೀಕ್ಷಿಸಿದ ಡಿಕೆ ಶಿವಕುಮಾರ್
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ 6 ವಿಕೆಟ್‌ಗಳ ಸೋಲು ಕಂಡಿದ್ದು, ಈ ಮೂಲಕ ಐಪಿಎಲ್ ಟೂರ್ನಿಯಿಂದಲೇ ಹೊರಬಿದ್ದಿದೆ. ಆರ್‌ಸಿಬಿಯ ಪ್ರಯತ್ನದ ಹೊರತಾಗಿಯೂ ಜಿಟಿ ಮುಂದೆ ಸೋಲೊಪ್ಪಿಕೊಳ್ಳಬೇಕಾಯಿತು. ಹೀಗಾಗಿ, ಮುಂಬೈ ಇಂಡಿಯನ್ಸ್ ತಂಡ ಪ್ಲೇಆಫ್ ಪ್ರವೇಶಿಸಿದೆ.
ಇತ್ತ, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಪುತ್ರಿ ಐಶ್ವರ್ಯಾ ಹಾಗೂ ಪುತ್ರನೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯವನ್ನು ವೀಕ್ಷಿಸಿದ್ದಾರೆ.
ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ RCB ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ರೋಚಕ #IPL ಪಂದ್ಯ ವೀಕ್ಷಿಸಿದೆ.
ನಮ್ಮ ಹುಡುಗರು ಈ ಸಾರಿ ಸೋತಿರಬಹುದು, ಆದರೆ ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ.
ಏನೇ ಆದ್ರು ನನ್ನ ಫೇವರಿಟ್ #RCB
ಕಪ್ ನಮ್ಮದಾಗುವ ಸಮಯ ಬಂದೇ… pic.twitter.com/WvqzXCLhdH— DK Shivakumar (@DKShivakumar) May 22, 2023
ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ರೋಚಕ ಐಪಿಎಲ್ ಪಂದ್ಯವನ್ನು ವೀಕ್ಷಿಸಿದೆ ಎಂದು ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ರಾಜಕೀಯ ಒತ್ತಡದ ನಡುವೆಯೂ ಐಪಿಎಲ್ ಮ್ಯಾಚ್ ವೀಕ್ಷಿಸಿದ ಸಿದ್ದರಾಮಯ್ಯ!
'ನಮ್ಮ ಹುಡುಗರು ಈ ಸಾರಿ ಸೋತಿರಬಹುದು. ಆದರೆ, ಅತ್ಯುತ್ತಮ ಆಟದಿಂದ ಎಲ್ಲರ ಹೃದಯ ಗೆದ್ದಿದ್ದಾರೆ. ಏನೇ ಆದ್ರು ನನ್ನ ಫೇವರಿಟ್ ಆರ್‌ಸಿಬಿ. ಕಪ್ ನಮ್ಮದಾಗುವ ಸಮಯ ಬಂದೇ ಬರುತ್ತೆ. ನಿರಾಸೆ ಬೇಡ, ಆಶಾವಾದವಿರಲಿ ಎಂದು ಡಿಕೆ ಶಿವಕುಮಾರ್ ಅಭಿಮಾನಿಗಳಿಗೆ ತಿಳಿಸಿದ್ದಾರೆ