ದುರಂತ ಘಟನೆ: ಬೆಂಗಳೂರಿನ ಜಲಾವೃತಗೊಂಡ ಅಂಡರ್‌ಪಾಸ್‌ನಲ್ಲಿ ಸಿಲುಕಿ 23 ವರ್ಷದ ಮಹಿಳೆ ಸಾವು; ಎಫ್‌ಐಆರ್‌ ದಾಖಲು

ಭಾನುವಾರ ರಾಜ್ಯದಾದ್ಯಂತ ಮಳೆ ಅಬ್ಬರಿಸಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಅವಘಡಗಳು ಸಂಭವಿಸಿವೆ. ಬೆಂಗಳೂರು ನಗರದಲ್ಲಿ ಜಲಾವೃತಗೊಂಡಿದ್ದ ಅಂಡರ್‌ಪಾಸ್‌ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮಹಿಳೆ ಸಾವಿಗೀಡಾಗಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ. 
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ಬೆಂಗಳೂರು: ಭಾನುವಾರ ರಾಜ್ಯದಾದ್ಯಂತ ಮಳೆ ಅಬ್ಬರಿಸಿದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಅವಘಡಗಳು ಸಂಭವಿಸಿವೆ. ಬೆಂಗಳೂರು ನಗರದಲ್ಲಿ ಜಲಾವೃತಗೊಂಡಿದ್ದ ಅಂಡರ್‌ಪಾಸ್‌ನಲ್ಲಿ ಮುಳುಗಡೆಯಾದ ಕಾರಿನಲ್ಲಿದ್ದ ಮಹಿಳೆ ಸಾವಿಗೀಡಾಗಿದ್ದು, ಈ ಸಂಬಂಧ ಎಫ್ಐಆರ್ ದಾಖಲಾಗಿದೆ. 

23 ವರ್ಷದ ಯುವತಿ ಭಾನುರೇಖಾ ಸಾವಿನ ಕುರಿತು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಿನ್ನೆ ಬೆಂಗಳೂರಿನ ಕೆಆರ್ ಸರ್ಕಲ್ ಪ್ರದೇಶದಲ್ಲಿ ಜಲಾವೃತಗೊಂಡಿದ್ದ ಅಂಡರ್ ಪಾಸ್‌ನಲ್ಲಿ ಮುಳುಗಿ ಸಾವಿಗೀಡಾಗಿದ್ದರು.

ಆಕೆಯ ಸಹೋದರ ಸಂದೀಪ್ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ಯುವತಿಯ ಕುಟುಂಬ ಸದಸ್ಯರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ, ಸಾಂತ್ವನ ಹೇಳಿದರು. ಅಲ್ಲದೆ, ಮೃತ ಯುವತಿಯ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ್ದಾರೆ ಮತ್ತು ಮಹಿಳೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com