
ಸಂಗ್ರಹ ಚಿತ್ರ
ಬೆಂಗಳೂರು: ಬೆಂಗಳೂರು ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದಲ್ಲಿ ಕೈದಿಯೊಬ್ಬರು ಶೌಚಾಲಯದಲ್ಲಿ ಶೂಲೇಸ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ಸುನೀಲ್ ಮೃತ ವ್ಯಕ್ತಿಯಾಗಿದ್ದಾರೆ. ಬಿಬಿಎಂಪಿ ಕಾರ್ಪೊರೇಟರ್ ಸಂಬಂಧಿಯೊಬ್ಬರನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಸುನೀಲ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಎಂದು ವರದಿಗಳು ತಿಳಿಸಿವೆ.
ಇದನ್ನೂ ಓದಿ: ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
ಒಂದು ವರ್ಷದಿಂದ ಜೈಲಿನಲ್ಲಿದ್ದ ಸುನೀಲ್ ಜೈಲಿನಲ್ಲಿದ್ದು, ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.