
ಹಿಂದೂ ಸಂಘಟನೆಯ ಧ್ವಜ (ಸಾಂಕೇತಿಕ ಚಿತ್ರ)
ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ.
ಘಟನೆಯಲ್ಲಿ, ಬಜರಂಗದಳದ ಸ್ಥಳೀಯ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ ತಾಲೂಕಿನ ಮಾಣಿ ಬಳಿ ಈ ಘಟನೆ ನಡೆದಿದೆ. ಈ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿಯ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಸ್ಥಾನಗಳ ಪೈಕಿ ಆರರಲ್ಲಿ ಬಿಜೆಪಿ ಗೆದ್ದಿದೆ.
ಇದನ್ನೂ ಓದಿ: ಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು: ಡಿಕೆಶಿ
ಕಾಂಗ್ರೆಸ್ ನವರು ಈ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಾಳಿಕೋರರು ಓಮ್ನಿ ವಾಹನದಲ್ಲಿ ಬಂದಿದ್ದು, ಅವರು ಸಂತ್ರಸ್ತರಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಕೆಳಗೆ ಬೀಳುತ್ತಿದ್ದಂತೆ ದಾಳಿಕೋರರು ಕತ್ತಿಗಳಿಂದ ಹಲ್ಲೆ ನಡೆಸಿದ್ದಾರೆ. ಮಹೇಂದ್ರ ಮತ್ತು ಪ್ರಶಾಂತ್ ಅವರ ತಲೆ ಮತ್ತು ಕಾಲಿಗೆ ಗಾಯಗಳಾಗಿವೆ.
ಮಂಗಳೂರಿನ ಕೆಲ ನಿವಾಸಿಗಳಾದ ರಾಕೇಶ್, ಮಣಿ ಮಂಜುನಾಥ್ ಮತ್ತು ಮಹಾಲಿಂಗ ಎಂಬುವರು ದಾಳಿ ನಡೆಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ.