ಮುಖ್ಯಮಂತ್ರಿಗಳಿಂದಲೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ: ಡಿ.ಕೆ.ಶಿವಕುಮಾರ್
ಮುಖ್ಯಮಂತ್ರಿಗಳಿಂದಲೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಸಂಪುಟ ವಿಸ್ತರಣೆ ಮಾಡುವ ಅಧಿಕಾರ ಅವರಿಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
Published: 24th May 2023 01:35 PM | Last Updated: 24th May 2023 01:43 PM | A+A A-

ಡಿಕೆ.ಶಿವಕುಮಾರ್.
ಬೆಂಗಳೂರು: ಮುಖ್ಯಮಂತ್ರಿಗಳಿಂದಲೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಸಂಪುಟ ವಿಸ್ತರಣೆ ಮಾಡುವ ಅಧಿಕಾರ ಅವರಿಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಂಪುಟ ವಿಸ್ತರಣೆ ಮಾಡುವ ಅಧಿಕಾರ ಮುಖ್ಯಮಂತ್ರಿಗಳಿಗೆ. ಸಂಪುಟ ವಿಸ್ತರಣೆ ಬಗ್ಗೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.
ಇದೇ ವೇಳೆ ಪೊಲೀಸರಿಗೆ ನೀಡಲಾಗಿರುವ ಖಡಕ್ ಸೂಚನೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ. 3-4 ಸ್ಥಳಗಳಲ್ಲಿ ಪೊಲೀಸ್ ಅಧಿಕಾರಿಗಳು ತಮ್ಮ ಅಜೆಂಡಾವನ್ನು ಹೇರಿದ್ದಾರೆ. ತಮ್ಮ ಸಮವಸ್ತ್ರವನ್ನು ತೆಗೆದು ರಾಜಕೀಯ ಉಡುಗೆಗಳನ್ನು ಧರಿಸಿರುವುದು ಕಂಡು ಬಂದಿದೆ. ಫೋಟೋಗಳಿಗೂ ಪೋಸ್ ನೀಡಿದ್ದಾರೆ. ಇದು ಅಸಂವಿಧಾನಿಕ ಎಂದು ಕಿಡಿಕಾರಿದ್ದಾರೆ.