ಮಂಗಳೂರಿನ ಎಸ್​ಡಿಪಿಐ ಕಚೇರಿಗೆ ಬೀಗ; ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮಂಗಳೂರಿನಲ್ಲಿರುವ ತನ್ನ ಕಚೇರಿಗೆ ಬೀಗ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. 
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಮಂಗಳೂರಿನಲ್ಲಿರುವ ತನ್ನ ಕಚೇರಿಗೆ ಬೀಗ ಹಾಕಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ಆದರೆ, ಕಾನೂನುಬಾಹಿರ ಚಟುವಟಿಕೆಗಳ ತಡೆ (ಯುಎಪಿ) ಕಾಯಿದೆಯಡಿ ಜಿಲ್ಲಾ ನ್ಯಾಯಾಧೀಶರ ಮುಂದೆ ಈ ಎಲ್ಲಾ ವಿವಾದಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಹೇಳಿದೆ.

2022ರ ಸೆಪ್ಟೆಂಬರ್ 27 ರಂದು ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಇತರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಸ್ಥೆಗಳೆಂದು ಘೋಷಿಸಿತು. ಯುಎಪಿ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಕೇಂದ್ರವು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಮರುದಿನ, ರಾಜ್ಯ ಸರ್ಕಾರವು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಎಸ್‌ಡಿಪಿಐಗೆ ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಿ ಕಚೇರಿಗಳಿಗೆ ಬೀಗ ಹಾಕಿತ್ತು. 

ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯ ಪ್ರಕಾರವೂ ಪಿಎಫ್‌ಐ ಜೊತೆ ಸಂಬಂಧ ಹೊಂದಿಲ್ಲ. ಪಿಎಫ್‌ಐ ಮತ್ತದರ ಅಂಗ ಸಂಸ್ಥೆಗಳನ್ನು ನಿಷೇಧಿಸುವ ಸಂದರ್ಭದಲ್ಲಿ ಗೃಹ ಸಚಿವಾಲಯ ಎಸ್‌ಡಿಪಿಐ ಹೆಸರು ಸೇರಿಸಿಲ್ಲ. ಹೀಗಿದ್ದರೂ, ಸರ್ಕಾರ ಪಕ್ಷಕ್ಕೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ, ಜಪ್ತಿ ಮಾಡಿದೆ. ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯನ್ನು ಮೀರಿ ರಾಜ್ಯ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಎಸ್‌ಡಿಪಿಐ ಹೇಳಿದೆ.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರ, ಎಸ್‌ಡಿಪಿಐ ಕಚೇರಿಗಳನ್ನು ನಿಷೇಧಿತ ಪಿಎಫ್‌ಐ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ(ಸಿಎಫ್‌ಐ) ಸಂಘಟನೆಗಳ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಕೇಂದ್ರ ಸರ್ಕಾರ ರಾಜ್ಯಗಳಿಗೆ ನಿಯೋಜಿಸಿರುವ ಅಧಿಕಾರದಂತೆಯೇ ಸಮಗ್ರ ಮಾಹಿತಿ ಕಲೆಹಾಕಿ, ತನಿಖೆ ನಡೆಸಿದ ನಂತರವೇ ಜಿಲ್ಲಾಧಿಕಾರಿಗಳು ಕಚೇರಿಗಳಿಗೆ ಬೀಗ ಮುದ್ರೆ ಹಾಕಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದೆ. 

ನ್ಯಾಯಮೂರ್ತಿ ಎಂ ನಾಗಪ್ರಸನ್ನ, ಎಸ್‌ಡಿಪಿಐಗೆ ಸೇರಿದ ಕಚೇರಿಗಳಿಗೆ ಬೀಗ ಹಾಕಲು ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆಗಳು ಯುಎಪಿ ಕಾಯ್ದೆಯ ಸೆಕ್ಷನ್ 8ರ ಉಪವಿಭಾಗ 3 ಮತ್ತು 4 ರ ಅಡಿಯಲ್ಲಿವೆ. ಯುಎಪಿ ಕಾಯಿದೆಯ ಸೆಕ್ಷನ್ 8 (8) ರ ಅಡಿಯಲ್ಲಿ ಪರ್ಯಾಯ ಪರಿಹಾರವು ಶಾಸನಬದ್ಧವಾಗಿದೆ. ಏಕೆಂದರೆ, ರಾಜ್ಯದ ಕೃತ್ಯಗಳಿಗೆ ಸಾಕ್ಷ್ಯವನ್ನು ದಾಖಲಿಸುವುದು ಕಡ್ಡಾಯವಾಗಿದೆ ಎಂದಿದ್ದಾರೆ.

ರಾಜ್ಯ ಸರ್ಕಾರವು ತನಗೆ ನೀಡಿರುವ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂಬ ವಾದಕ್ಕೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಸರ್ಕಾರವು ಕೆಲವು ಖಚಿತ ಮಾಹಿತಿ ಮೇಲೆ ಅರ್ಜಿದಾರರ ಕಚೇರಿಗಳಿಗೆ ಬೀಗ ಜಡಿದಿದೆ. ಮಂಗಳೂರಿನಲ್ಲಿರುವ ಎಲ್ಲಾ ಕಚೇರಿಗಳನ್ನು ಸೀಲ್ ಮಾಡಲಾಗಿದೆ ಮತ್ತು ಬೇರೆಲ್ಲಿಯೂ ಅಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ ಕಾಯ್ದೆಯ ಸೆಕ್ಷನ್ 8 ರ ಪ್ರಕಾರ ತನ್ನ ಪ್ರಕರಣವನ್ನು ಸಾಬೀತುಪಡಿಸಲು ಸಾಕ್ಷ್ಯದ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com