ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರು ಅಪಾರ ಪ್ರಮಾಣದ ಬೆಳೆ ಹಾನಿಯನ್ನು ಅನುಭವಿಸಿದ್ದು, ರೈತರಿಗೆ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯವರು ಆಗ್ರಹಿಸಿದ್ದಾರೆ.

ಕಲಬುರಗಿ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರು ಅಪಾರ ಪ್ರಮಾಣದ ಬೆಳೆ ಹಾನಿಯನ್ನು ಅನುಭವಿಸಿದ್ದು, ರೈತರಿಗೆ ನೆರವು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಹಾಗೂ ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆಯವರು ಆಗ್ರಹಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾಧಿಕಾರಿಗಳ ಜತೆ ಆನ್‌ಲೈನ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು, ಮುಂಗಾರು ಆರಂಭವಾಗುತ್ತಿದ್ದಂತೆ ರೈತರ ಹೊಲಗಳಲ್ಲಿ ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ.ಕೃಷಿ ಚಟುವಟಿಕೆ ಆರಂಭಿಸಲಿದ್ದು, ರೈತರಿಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ರೈತರು ಅತಿವೃಷ್ಟಿ ಮಾತ್ರವಲ್ಲದೆ ಕೊಳೆ ರೋಗದಿಂದ ಬೆಳೆ ನಷ್ಟ ಅನುಭವಿಸಿದ್ದರು. ಹೀಗಾಗಿ ಬೆಳೆ ನಷ್ಟ ಪರಿಹಾರ ನೀಡುವ ಮೂಲಕ ರೈತರಿಗೆ ನೆರವಾಗುವುದು ನಮ್ಮ ಕರ್ತವ್ಯ ಎಂದು ಹೇಳಿದರು.

ಇದೇ ವೇಳೆ ಕಳಪೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಪೂರೈಕೆಯ ಬಗ್ಗೆ ದೂರು ಬಾರದಂತೆ ಕೃಷಿ ಇಲಾಖೆ ರೈತರಿಗೆ ಗುಣಮಟ್ಟದ ಬೀಜ ಮತ್ತು ಗೊಬ್ಬರವನ್ನು ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಎಲ್ಲಾ ನೂತನ ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Stories

No stories found.

Advertisement

X
Kannada Prabha
www.kannadaprabha.com