ಶಾಂತಿ ಕದಡಿದರೆ ಭಜರಂಗ ದಳ, ಆರ್‌ಎಸ್‌ಎಸ್ ಗೂ ನಿಷೇಧ; ಬಿಜೆಪಿ ಜಾರಿಗೆ ತಂದಿದ್ದ ಮಸೂದೆಗಳು ವಾಪಸ್: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು.
Published: 24th May 2023 02:25 PM | Last Updated: 24th May 2023 04:15 PM | A+A A-

ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಭಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರ್ಕಾರ ನಿಷೇಧಿಸುತ್ತದೆ, ಒಂದು ವೇಳೆ ಬಿಜೆಪಿ ನಾಯಕರಿಗೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ, ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್‌ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.
ಇದನ್ನೂ ಓದಿ: ಬಿಜೆಪಿ ಚುನಾವಣೆಯಲ್ಲಿ ಸೋತಿದ್ದೇಕೆ? ಪಕ್ಷದಲ್ಲಿ ಎಷ್ಟು ಒಡಕಿದೆ ಎಂಬುದರತ್ತ ಅದು ಯೋಚಿಸಬೇಕು: ಪ್ರಿಯಾಂಕ್ ಖರ್ಗೆ
ಕಾನೂನನ್ನು ಕೈಗೆ ತೆಗೆದುಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್‌ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದಿದ್ದಾರೆ.
ಹಿಜಾಬ್, ಹಲಾಲ್ ಕಟ್ ಮತ್ತು ಗೋಹತ್ಯೆ ಕಾನೂನುಗಳ ಮೇಲಿನ ನಿಷೇಧವನ್ನು ಸರ್ಕಾರ ಹಿಂಪಡೆಯಲಿದೆ ಎಂದು ಅವರು ಹೇಳಿದರು. ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ಸಿಗರಾಗಲಿ ಅಥವಾ ಯಾವುದೇ ಪಕ್ಷದ ಕಾರ್ಯಕರ್ತರಾಗಲಿ, ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು: ಡಿಕೆಶಿ
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ, ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಮಾಹಿತಿ ನೀಡಿದರು.