ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತ
ಟೇಕಾಫ್ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
Published: 25th May 2023 12:11 PM | Last Updated: 25th May 2023 12:11 PM | A+A A-

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಮಂಗಳೂರು; ಟೇಕಾಫ್ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.
ಇಂದು ಬೆಳಗ್ಗೆ 8.30ಕ್ಕೆ ಪ್ರಯಾಣಿಕರ ಸಹಿತ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಇಂಡಿಗೋ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಇದನ್ನರಿತ ಪೈಲಟ್ ಭಾರೀ ದುರಂತವನ್ನು ತಪ್ಪಿಸುವ ಮೂಲಕ ಪ್ರಯಾಣಿಕರ ಜೀವ ಉಳಿಸಿದ್ದಾರೆ. ಹಕ್ಕಿ ಡಿಕ್ಕಿ ಹೊಡೆದೊಡನೆ ಪೈಲಟ್ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ್ದಾರೆ. ನಂತರ ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಾಸ್ ಬಂದಿಳಿದಿದೆ. ಸದ್ಯ ಅಧಿಕಾರಿಗಳು ಪ್ರಯಾಣಿಕರನ್ನು ಇಳಿಸಿ ವಿಮಾನದ ತಪಾಸಣೆ ಮಾಡುತ್ತಿದ್ದಾರೆ.
ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರನ್ನು ಕಳುಹಿಸಲಾಗಿದೆ.