ಹೊಸಪೇಟೆ: ಹಂಪಿಯಲ್ಲಿ ಜಿ-20 ಶೃಂಗಸಭೆಗೆ ಸಿದ್ಧತೆ ಆರಂಭ

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 10-12ರವರೆಗೆ ನಡೆಯಲಿರುವ ಜಿ.20 ಶೃಂಗಸಭೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಸಿದ್ಧತೆ ಆರಂಭಗೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹೊಸಪೇಟೆ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 10-12ರವರೆಗೆ ನಡೆಯಲಿರುವ ಜಿ.20 ಶೃಂಗಸಭೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಸಿದ್ಧತೆ ಆರಂಭಗೊಂಡಿದೆ.

ಕಳೆದ ಎರಡು ತಿಂಗಳಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಹಂಪಿಗೆ ಎರಡು ಬಾರಿ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಸಭೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ವ್ಯವಸ್ಥೆಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ವಿಜಯನಗರ ಆಡಳಿತ ಮಂಡಳಿಗೆ ಸಲಹೆಗಳನ್ನು ನೀಡುತ್ತಿದ್ದು, ಇದರಂತೆ ಪಾರ್ಕಿಂಗ್ ಸ್ಲಾಟ್‌ಗಳನ್ನು ರಚನೆ, ಭದ್ರತೆ ಕಾರ್ಯ, ವಸತಿ ಸೌಕರ್ಯಗಳ ಹೆಚ್ಚುವುದು ಸೇರಿದಂತೆ ಇತರೆ ವ್ಯವಸ್ಥೆಗಳ ಕಲ್ಪಿಸುವ ಕುರಿತು ಪೂರ್ವಸಿದ್ಧತಾ ಕಾರ್ಯಗಳ ಕೈಗೊಳ್ಳಲಾಗುತ್ತಿದೆ.

ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ಅವರು ಮಾತನಾಡಿ, ಪಾರಂಪರಿಕ ಪ್ರದೇಶ ಹಂಪಿಯಲ್ಲಿಯೇ ಸಭೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮೈಸೂರು ನಂತರ ಹಂಪಿ ಶೃಂಗಸಭೆಯ ಆತಿಥ್ಯ ವಹಿಸುತ್ತಿದೆ. ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಹಂಪಿಗೆ ಎರಡು ಬಾರಿ ಭೇಟಿ ನೀಡಿದ್ದಾರೆ. ಮತ್ತೊಮ್ಮೆ ಹಂಪಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆಂದು ಹೇಳಿದ್ದಾರೆ. ಜಿ20 ರಾಷ್ಟ್ರಗಳ 200ಕ್ಕೂ ಹೆಚ್ಚು ಪ್ರತಿನಿಧಿಗಳು ಹಂಪಿಗೆ ಭೇಟಿ ನೀಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com