ರಾಯಚೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
Published: 26th May 2023 01:35 PM | Last Updated: 26th May 2023 01:35 PM | A+A A-

ಸಂಗ್ರಹ ಚಿತ್ರ
ರಾಯಚೂರು: ಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.
ನೀರು ಸರಬರಾಜು ಮಾಡುವ ಪೈಪ್ ಲೈನ್‌ಗೆ ಚರಂಡಿ ನೀರು ಸೇರುತ್ತಿದ್ದು, ಕಳೆದ 2-3 ದಿನಗಳಿಂದ ಜನರು ಅಸ್ವಸ್ಥರಾಗುತ್ತಿದ್ದಾರೆಂದು ತಿಳಿದುಬಂದಿದೆ.
ಇದರಂತೆ ಇಂದು 5 ವರ್ಷದ ಬಾಲಕ ಹನುಮೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆಂದು ವರದಿಗಳು ತಿಳಿಸಿವೆ.
ಕಲುಷಿತ ನೀರು ಸೇವನೆಯಿಂದಾಗಿ ಮಕ್ಕಳು, ಮಹಿಳೆಯರು ಸೇರಿ 30 ಕ್ಕೂ ಹೆಚ್ಚು ಜನ ವಾಂತಿ ಭೇದಿಯಿಂದ ರಾಯಚೂರಿನ ರಿಮ್ಸ್, ಅರಕೇರಾ, ದೇವದುರ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಸುದ್ದಿ ತಿಳಿಯುತ್ತಿದ್ದಂತಯೇ ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರ ಬಾಬು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದು ಅಗತ್ಯ ವೈದ್ಯಕೀಯ ಸಲಕರಣೆ, ಔಷಧಿ ವ್ಯವಸ್ಥೆಗಳನ್ನು ಮಾಡುತ್ತಿದ್ದಾರಂದು ವರದಿಗಳು ತಿಳಿಸಿವೆ,
ಸದ್ಯ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ಗ್ರಾಮದ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.