ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Published: 26th May 2023 11:24 AM | Last Updated: 26th May 2023 11:24 AM | A+A A-

ಪ್ರಾತಿನಿಧಿಕ ಚಿತ್ರ
ರಾಯಚೂರು: ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಅಸ್ವಸ್ಥರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಮತ್ತು ಅರಕೇರಾ ಮತ್ತು ದೇವದುರ್ಗದ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಪೊಲೀಸರು ಕೂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳು ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಕುಡಿಯುವ ನೀರಿಗೆ ತ್ಯಾಜ್ಯ ನೀರು ಸೇರಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ರಾಯಚೂರಿನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ ತನಿಖೆಗೆ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರು. ಪರಿಹಾರ- ಸಿಎಂ ಬೊಮ್ಮಾಯಿ
2022ರ ಜೂನ್‌ನಲ್ಲಿ ರಾಯಚೂರು ಪಟ್ಟಣದಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ಮೂವರು ಸಾವಿಗೀಡಾಗಿದ್ದರು ಮತ್ತು 23 ಮಕ್ಕಳು ಸೇರಿದಂತೆ 60ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲುಷಿತ ನೀರು ಸೇವಿಸಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು.
ರಾಯಚೂರು ಜಿಲ್ಲೆ ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದೆ.