ಬೆಂಗಳೂರಿನಲ್ಲಿ ರೌಡಿಸಂ ಸಹಿಸುವುದಿಲ್ಲ: ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್
ಪ್ರಭಾರಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಗುರುವಾರ ನಗರ ಪೊಲೀಸ್ ಕಮಿಷನರ್ ಕಚೇರಿಗೆ ತಮ್ಮ ಚೊಚ್ಚಲ ಭೇಟಿ ನೀಡಿದ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ರೌಡಿಸಂ ಮತ್ತು ಸಂಘಟಿತ ಅಪರಾಧಗಳ ಬಗ್ಗೆ ಶೂನ್ಯ ಸಹಿಷ್ಣುತೆ ಇರುತ್ತದೆ ಎಂದಿದ್ದಾರೆ.
Published: 26th May 2023 10:39 AM | Last Updated: 26th May 2023 10:42 AM | A+A A-

ಗುರುವಾರ ಬೆಂಗಳೂರಿನಲ್ಲಿರುವ ತಮ್ಮ ಕಚೇರಿಯಲ್ಲಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರೊಂದಿಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ (ಬಲ).
ಬೆಂಗಳೂರು: ಪ್ರಭಾರಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಗುರುವಾರ ನಗರ ಪೊಲೀಸ್ ಕಮಿಷನರ್ ಕಚೇರಿಗೆ ತಮ್ಮ ಚೊಚ್ಚಲ ಭೇಟಿ ನೀಡಿದ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ರೌಡಿಸಂ ಮತ್ತು ಸಂಘಟಿತ ಅಪರಾಧಗಳ ಬಗ್ಗೆ ಶೂನ್ಯ ಸಹಿಷ್ಣುತೆ ಇರುತ್ತದೆ ಎಂದಿದ್ದಾರೆ.
ನಗರವನ್ನು ಮಾದಕ ವಸ್ತುಗಳಿಂದ ಮುಕ್ತಗೊಳಿಸುವುದು ಮುಖ್ಯ ಗುರಿಯಾಗಿದೆ. ಎಲ್ಲಾ ಪೊಲೀಸರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿರಬೇಕು. ತಾಂತ್ರಿಕ ಅಪರಾಧಗಳ ತನಿಖೆಗೆ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಅಪರಾಧಿಗಳೊಂದಿಗೆ ಕೈಜೋಡಿಸುವ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಎಲ್ಲ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಐಪಿಎಸ್ ಅಧಿಕಾರಿ, ಪ್ರಮುಖ ಅಪರಾಧ ಪ್ರಕರಣಗಳನ್ನು ಖುದ್ದು ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಕರ್ನಾಟಕವನ್ನು 'ಮಾದಕವಸ್ತು ಮುಕ್ತ' ರಾಜ್ಯವನ್ನಾಗಿ ಮಾಡುವ ಗುರಿ: ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್
ಪೊಲೀಸರು ಜನಸ್ನೇಹಿಯಾಗಿರಬೇಕು ಮತ್ತು ಸಾರ್ವಜನಿಕರೊಂದಿಗೆ ಸರಿಯಾದ ನಡವಳಿಕೆ ಅತ್ಯಗತ್ಯ. ಎಲ್ಲಾ ದೂರುಗಳನ್ನು ದಾಖಲಿಸಬೇಕು. ಡಿಸಿಪಿಗಳು ತಮ್ಮ ವ್ಯಾಪ್ತಿಯಲ್ಲಿ ಒಂದು ದಿನದಲ್ಲಿ ಕನಿಷ್ಠ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು ಮತ್ತು ಎಲ್ಲಾ ಎಸಿಪಿಗಳು ಕಡ್ಡಾಯವಾಗಿ ಉಪವಿಭಾಗಗಳ ಎಲ್ಲಾ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಬೇಕು. ಅದನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದು ಅಲೋಕ್ ಮೋಹನ್ ಹೇಳಿದರು.
ಇದಲ್ಲದೆ, ಸಂಚಾರ ನಿರ್ವಹಣೆಯ ಜೊತೆಗೆ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗೆ ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದರು.