ಕೋವಿಡ್ ಮಾರ್ಗಸೂಚಿ ಉಲ್ಲಂಘನೆ: 8 ಪ್ರಕರಣಗಳ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಡಿಕೆ ಶಿವಕುಮಾರ್

ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಮೇಕೆದಾಟು ಪಾದಯಾತ್ರೆಯ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಮತ್ತು ಸರ್ಕಾರದ ಆದೇಶಗಳನ್ನು ಧಿಕ್ಕರಿಸಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಸಂಬಂಧ ದಾಖಲಾಗಿರುವ ಎಂಟು ಪ್ರಕರಣಗಳಿಗೆ ಸಂಬಂಧಿಸಿದ ಪ್ರತ್ಯೇಕ ಅರ್ಜಿಗಳನ್ನು ಶುಕ್ರವಾರ ಕೈಗೆತ್ತಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ವಿಚಾರಣೆಯನ್ನು ಒಂದು ವಾರಕ್ಕೆ ಮುಂದೂಡಿತು.

ಪ್ರಕರಣಗಳ ಆಕ್ಷೇಪಣೆಗಳನ್ನು ಸರಿಪಡಿಸಲು ಕಾಲಾವಕಾಶ ನೀಡುವಂತೆ ಅರ್ಜಿದಾರ ಡಿಕೆ ಶಿವಕುಮಾರ್ ಅವರ ಪರ ವಕೀಲರು ನ್ಯಾಯಾಲಯದ ಮುಂದೆ ಮನವಿ ಮಾಡಿದರು ಮತ್ತು ಪೀಠವು ಸಮ್ಮತಿಸಿ ಸಮಯಕ್ಕೆ ಸರಿಯಾಗಿ ತಿದ್ದುಪಡಿಗಳನ್ನು ಮಾಡುವಂತೆ ವಕೀಲರಿಗೆ ತಿಳಿಸಿತು.

ಕೋವಿಡ್ ಸಾಂಕ್ರಾಮಿಕದ ವೇಳೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ 2022ರ ಜನವರಿ 9ರಿಂದ ಶಿವಕುಮಾರ್ ನೇತೃತ್ವದಲ್ಲಿ 10 ದಿನಗಳ ಪಾದಯಾತ್ರೆಯನ್ನು ಕಾಂಗ್ರೆಸ್ ಆರಂಭಿಸಿತ್ತು. ಈ ಬಗ್ಗೆ ರಾಮನಗರ ತಹಸೀಲ್ದಾರ್ ಹಾಗೂ ಇತರೆ ಸರ್ಕಾರಿ ಅಧಿಕಾರಿಗಳು ರಾಮನಗರ ಗ್ರಾಮಾಂತರ ಹಾಗೂ ಇತರೆ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿದ್ದರು.

ಪೊಲೀಸರು ಈ ವರ್ಷದ ಫೆಬ್ರುವರಿ 9 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಶಿವಕುಮಾರ್ ಹೈಕೋರ್ಟ್‌ನಲ್ಲಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿದ್ದರು.

ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯ 5 (3) ಎ, 143, 290, 336 ಮತ್ತು 141 ರ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ ಕಾಂಗ್ರೆಸ್‌ನ ಹಲವು ಹಾಲಿ ಶಾಸಕರು, ಎಂಎಲ್‌ಸಿಗಳು ಮತ್ತು ಹಿರಿಯ ನಾಯಕರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com