ಮಂಗಳೂರು: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ
ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ.
Published: 26th May 2023 11:13 AM | Last Updated: 26th May 2023 11:13 AM | A+A A-

ಸಾಂದರ್ಭಿಕ ಚಿತ್ರ
ಮಂಗಳೂರು: ಸೊಂಟಕ್ಕೆ ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ.
ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯಾಗಿದ್ದಾರೆ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರೂ ಆಗಿದ್ದರು.
ಶಾಂತಿಮೊಗರು ಅಲಂಗಾರಿನಲ್ಲಿ ದುರ್ಗಾಂಬ ಹಾರ್ಡ್‌ವೇರ್ ಎಂಬ ಅಂಗಡಿ ಹೊಂದಿರುವ ಸಾಮಾಜಿಕ, ಧಾರ್ಮಿಕ ಮುಂದಾಳು ಚಂದ್ರಶೇಖರ ಪೂಜಾರಿ (70) ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ 4 ಗಂಟೆ ವೇಳೆಗೆ ಕಾರನ್ನು ಸೇತುವೆ ಮೇಲೆ ನಿಲ್ಲಿಸಿ ಸೊಂಟಕ್ಕೆ ಹಗ್ಗದಿಂದ ಬಲೂನು ಕಟ್ಟಿಕೊಂಡು ನದಿಗೆ ಜಿಗಿದಿದ್ದಾರೆ.
ಶವ ಹುಡುಕಲು ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ ಸೊಂಟಕ್ಕೆ ಬಲೂನು ಕಟ್ಟಿಕೊಂಡಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಸದ್ಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.