ವಿಜಯಪುರ: ಬೈಕ್ಗೆ ಟಿಪ್ಪರ್ ಡಿಕ್ಕಿ, ಸ್ಥಳದಲ್ಲೇ ಅತ್ತೆ, ಅಳಿಯ ಸಾವು
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದ ತಂಗಡಗಿ ಬಳಿ ಗುರುವಾರ ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅತ್ತೆ ಹಾಗೂ ಅಳಿಯ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Published: 26th May 2023 12:37 AM | Last Updated: 26th May 2023 12:37 AM | A+A A-

ಸಾಂದರ್ಭಿಕ ಚಿತ್ರ
ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದ ತಂಗಡಗಿ ಬಳಿ ಗುರುವಾರ ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅತ್ತೆ ಹಾಗೂ ಅಳಿಯ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ ಹಾಗೂ ನಾಗೇಶ್ ಶಿವಪುರ ಎಂದು ಗುರುತಿಸಲಾಗಿದೆ. ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನು ಓದಿ: ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು
ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳೀಯ ನಿವಾಸಿಗಳು ಟಿಪ್ಪರ್ ಬೆನ್ನಟ್ಟಿ ಚಾಲಕನನ್ನು ಹಿಡಿದ್ದಾರೆ.
ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.