ಕಾಂಗ್ರೆಸ್ ಸರ್ಕಾರ ಅಸ್ವಿತ್ವಕ್ಕೆ ಬಂದ ಬೆನ್ನಲ್ಲೇ ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು!

ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.
ಪ್ರವೀಣ್ ನೆಟ್ಟಾರು
ಪ್ರವೀಣ್ ನೆಟ್ಟಾರು

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಅವರ ಸಚಿವಾಲಯದಲ್ಲಿ ನೀಡಿದ್ದ ಗುತ್ತಿಗೆ ಆಧಾರಿತ ಉದ್ಯೋಗಕ್ಕೆ ಕುತ್ತು ಬಂದಿದೆ.

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.

ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಪ್ರವೀಣ್ ಪತ್ನಿಗೆ ಮಾನವೀಯ ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷಾಧಿಕಾರ ಬಳಸಿ, ಕೆಲಸ ಕೊಡಿಸುವುದಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದ್ದರು.

ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವಾಲಯದಲ್ಲಿ ಹಿರಿಯ ಸಹಾಯಕಿ (ಗ್ರೂಪ್‌ ಸಿ) ಹುದ್ದೆಗೆ ಗುತ್ತಿಗೆ ಆಧಾರದಲ್ಲಿ 2022ರ ಸೆ. 22ರಂದು ನೇಮಿಸಲಾಗಿತ್ತು. ಈಗ ಕೆಲಸದಿಂದ ಬಿಡುಗಡೆಗೊಳಿಸಿರುವ ಆದೇಶ ಅವರ ಕೈ ತಲುಪಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮುಖ್ಯಮಂತ್ರಿ ಅಧಿಕಾರ ಇರುವ ತನಕ ಅಥವಾ ಮುಂದಿನ ಆದೇಶವರೆಗೆ ಎಂದು ನೇಮಕಾತಿ ಆದೇಶದಲ್ಲಿ ನಮೂದಿಸಲಾಗಿತ್ತು.  

ಅಲ್ಲದೆ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಅವರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com