ಕೊಪ್ಪಳ: ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭಾನುವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದಾರೆ.
Published: 28th May 2023 08:15 PM | Last Updated: 29th May 2023 02:05 PM | A+A A-

ಸಾಂದರ್ಭಿಕ ಚಿತ್ರ
ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭಾನುವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದಾರೆ.
ಮೃೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮೀಕಾ ಎಂದು ಗುರುತಿಸಲಾಗಿದೆ.
Karnataka | 6 people died after a car collided with a lorry in Koppal district. CM Siddaramaiah has announced Rs 2 lakhs compensation to the kin of victims: Karnataka CMO pic.twitter.com/eeBQbVmRei
— ANI (@ANI) May 28, 2023
ಇಂಡಿಕಾ ಕಾರಿನ ಟೈರ್ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಂಡಿಕಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನು ಓದಿ: ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು
ವಿಜಯಪುರದಿಂದ ಬೆಂಗಳೂರಿಗೆ ಹೊರಟಿದ್ದಾಗ ಈ ಭೀಕರ ಅಪಘಾತ ಸಂಭವಿಸಿದೆ.
ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.