ನಟ ಮಧು ಬಂಗಾರಪ್ಪಗೆ ಒಲಿದು ಬಂದ ಅದೃಷ್ಟ: 13 ವರ್ಷಗಳ ಬಳಿಕ ಸೊರಬ ಕ್ಷೇತ್ರಕ್ಕೆ ಸಚಿವ ಸ್ಥಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರು, ಮೊದಲ ಬಾರಿಗೆ ಬಾರಿಗೆ ಸಚಿವರಾಗಿದ್ದಾರೆ.
ಮಧು ಬಂಗಾರಪ್ಪ.
ಮಧು ಬಂಗಾರಪ್ಪ.

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಅವರು, ಮೊದಲ ಬಾರಿಗೆ ಬಾರಿಗೆ ಸಚಿವರಾಗಿದ್ದಾರೆ.

ಮಧು ಬಂಗಾರಪ್ಪ ಅವರು ನಟ ಮತ್ತು ನಿರ್ಮಾಪಕರಾಗಿದ್ದು, ಆಕಾಶ್ ಆಡಿಯೊ ಆಡಿಯೊ ಕಂಪನಿಯನ್ನು ಹೊಂದಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಅವರು, ಸೊರಬ ಕ್ಷೇತ್ರದಿಂದ ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಮಧು ಅವರಿಗೆ ಸಚಿವ ಸ್ಥಾನ ಲಭಿಸಿದೆ.

ಜೆಡಿಎಸ್‌ನಿಂದ ಪಕ್ಷಾಂತರಗೊಂಡ ಮಧು ಬಂಗಾರಪ್ಪ ಅವರು ಸುಮಾರು ಎರಡು ವರ್ಷಗಳ ಹಿಂದೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಬಳಿಕ ಸೊರಬ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದರು. ಚುನಾವಣೆಯಲ್ಲಿ ಬಿಜೆಪಿ ಪಕ್ಷದಲ್ಲಿರುವ ತಮ್ಮ ಸಹೋದರ ಕುಮಾರ್ ಬಂಗಾರಪ್ಪ ಅವರನ್ನು ಸೋಲಿಸಿದರು.

ಮೊದಲಿಗೆ ಸಿನಿಮಾದಲ್ಲಿ ವೃತ್ತಿ ಜೀವನ ಆರಂಭಿಸಿದ್ದ ಮಧು ಬಂಗಾರಪ್ಪ ಅವರು, 2013ರಲ್ಲಿ ರಾಜಕೀಯದಲ್ಲಿ ಸಕ್ರಿಯಗೊಂಡರು.

1966ರ ಸೆಪ್ಟೆಂಬರ್ 4ರಂದು ಜನಿಸಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪ ಹಾಗೂ ಶಂಕುತಲಾ ದಂಪತಿಯ ಎರಡನೇ ಪುತ್ರನಾಗಿದ್ದಾರೆ. ಇವರಿಗೆ ಮೂವರು ಸಹೋದರಿಯರಿದ್ದಾರೆ. ಸ್ಯಾಂಡಲ್‌ವುಡ್ ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಅವರು, ಮಧು ಅವರ ಸಹೋದರಿಯರಲ್ಲಿ ಒಬ್ಬರಾಗಿದ್ದಾರೆ. ಮಧು ಅವರು ಅನಿತಾ ಅವರನ್ನು ವಿವಾಹವಾಗಿದ್ದು, ದಂಪತಿಗೆ ಒಬ್ಬ ಮಗನಿದ್ದಾನೆ.

2013ರಲ್ಲಿ ರಾಜಕೀಯ ಪ್ರವೇಶ ಮಾಡಿದ ಮಧು ಬಂಗಾರಪ್ಪ ಅವರು, ತಮ್ಮ ಕುಟುಂಬದ ಭದ್ರಕೋಟೆಯಾಗಿದ್ದ ಸೊರಬ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್‌ ಪಡೆದು ಗೆಲುವು ಸಾಧಿಸಿದ್ದರು. ಈ ಸಂದರ್ಭದಲ್ಲಿ ಕೆಜೆಪಿಯಿಂದ ಕಣಕ್ಕಿಳಿದಿದ್ದ ಹರತಾಳು ಹಾಲಪ್ಪ ಅವರನ್ನು ಸೋಲಿಸಿದ್ದರು. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಅವರ ಸಹೋದರ ಕುಮಾರ್ ಬಂಗಾರಪ್ಪ ಮೂರನೇ ಸ್ಥಾನ ಪಡೆದರು. 2018ರ ಚುನಾವಣೆಯಲ್ಲಿ ಕುಮಾರ್ ಬಂಗಾರಪ್ಪ ಅವರು, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು. ನಂತರ ಮಧು ಬಂಗಾರಪ್ಪ ವಿರುದ್ಧ ಸೋಲು ಕಂಡಿದ್ದರು.

2013 ಮತ್ತು 2014ರಲ್ಲಿ ಮಧು ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ಮುಖ್ಯ ಸಚೇತಕರಾಗಿ ಕಾರ್ಯನಿರ್ವಹಿಸಿದ್ದರು. 2018 ರ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಜೆಡಿಎಸ್ ಮಧು ಅವರನ್ನು ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿತು.

2019 ರ ಲೋಕಸಭಾ ಚುನಾವಣೆಯಲ್ಲಿ ಮಧು ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು, ಆದರೆ, ಬಿಜೆಪಿಯ ಬಿವೈ ರಾಘವೇಂದ್ರ ವಿರುದ್ಧ ಸೋಲು ಕಂಡಿದ್ದರು.

ನಂತರ ಮಧು ಬಂಗಾರಪ್ಪ ಅವರು ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡರು. ಬಳಿಕ ಜುಲೈ 30, 2021 ರಂದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.

ನಂತರ ಅವರು ಕೆಪಿಸಿಸಿಯ ಒಬಿಸಿ ಸೆಲ್‌ನ ಅಧ್ಯಕ್ಷರಾಗಿ ಆಯ್ಕೆಯಾದರು. 2023ರ ವಿಧಾನಸಭೆ ಚುನಾವಣೆಗೆ ಕೆಪಿಸಿಸಿ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷರಾಗಿದ್ದರು.  ನಂತರ ಚುನಾಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ತಮ್ಮ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ ಕಣಕ್ಕಿಳಿದು, ಗೆಲುವು ಸಾಧಿಸುವ ಮೂಲಕ ಸಿದ್ದರಾಮಯ್ಯನವರ ಸಂಪುಟದಲ್ಲಿ ಸ್ಥಾನ ಗಿಟ್ಟಿಕೊಂಡರು. ಮಧು ಬಂಗಾರಪ್ಪ ಅವರು, ಶರಾವತಿ ಶಿಕ್ಷಣ ಟ್ರಸ್ಟ್ ಮತ್ತು ಮಲ್ನಾಡ್ ಶಾಲೆಗಳ ಅಧ್ಯಕ್ಷರೂ ಆಗಿದ್ದಾರೆ.

ಮಧು ಅವರು 1992 ರಲ್ಲಿ 'ಬೆಳ್ಳಿಯಪ್ಪ ಬಂಗಾರಪ್ಪ' ಸೇರಿದಂತೆ ಹಲವಾರು ಕನ್ನಡ ಚಲನಚಿತ್ರಗಳನ್ನು ನಿರ್ಮಿಸಿದ್ದಾರೆ. ಇದಲ್ಲದೆ, ಹಲವಾರು ಸಿನಿಮಾಗಳಲ್ಲೂ ನಟಿಸಿದ್ದಾರೆ ಮತ್ತು ನಿರ್ಮಿಸಿದ್ದಾರೆ, ಇವರ 'ಕಲ್ಲರಳಿ ಹೂವಾಗಿ' ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಕೂಡ ಲಭಿಸಿದೆ.

ತಮ್ಮ ಆಕಾಶ್ ಆಡಿಯೊ ಮೂಲಕ ಫ್ಯಾನ್‌ಸ್ಟ್ರೀಟ್ ಹೆಸರಿನ ಮನರಂಜನಾ ಉದ್ಯಮ ಆಧಾರಿತ ಸ್ಟಾರ್ಟ್‌ಅಪ್'ನ್ನೂ ಕೂಡ ಮಧು ಅವರು ಆರಂಭಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com