ನಿರುದ್ಯೋಗ ಸಮಸ್ಯೆ ಬಗೆಹರಿಸುತ್ತೇವೆ, ಶೀಘ್ರದಲ್ಲೇ ಎಲ್ಲಾ ಖಾಲಿ ಹುದ್ದೆ ಭರ್ತಿ: ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಮ್ಮ ಸರ್ಕಾರ ಪರಿಹರಿಸಲಿದೆ. ಶೀಘ್ರದಲ್ಲೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭರವಸೆ ನೀಡಿದ್ದಾರೆ.
Published: 28th May 2023 06:02 PM | Last Updated: 28th May 2023 06:02 PM | A+A A-

ಡಿ,ಕೆ ಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಮ್ಮ ಸರ್ಕಾರ ಪರಿಹರಿಸಲಿದೆ. ಶೀಘ್ರದಲ್ಲೇ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಭರವಸೆ ನೀಡಿದ್ದಾರೆ.
ಇಂದು ಅವರ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಉದ್ಯೋಗ ಆಕಾಂಕ್ಷಿಗಳನ್ನು ಉದ್ದೇಶಿಸಿ ಮಾತನಾಡಿದ ಡಿಕೆಶಿ, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದು ನಮ್ಮ ಕರ್ತವ್ಯ ಮತ್ತು ಸರ್ಕಾರದ ಮೊದಲ ಆದ್ಯತೆಯಾಗಿದೆ. ಆದರೆ ಇದನ್ನು 1 ಅಥವಾ 2 ದಿನದಲ್ಲಿ ಮಾಡಲಾಗುತ್ತದೆ ಎಂದು ನಾನು ಹೇಳಲಾರೆ ಎಂದರು.
ಇದನ್ನು ಓದಿ: ನೂತನ ಸಚಿವರಿಗೆ ಖಾತೆ ಹಂಚಿಕೆ: ಸಿದ್ದುಗೆ ಹಣಕಾಸು, ಡಿಕೆಶಿಗೆ ಜಲಸಂಪನ್ಮೂಲ, ಪರಂಗೆ ಗೃಹ ಇಲಾಖೆ ಸಾಧ್ಯತೆ
ಕರ್ನಾಟಕ ಪವರ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ ಲಿಮಿಟೆಡ್‌ಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಒತ್ತಾಯಿಸಿ 1,500ಕ್ಕೂ ಹೆಚ್ಚು ಉದ್ಯೋಗ ಆಕಾಂಕ್ಷಿಗಳು ಇಂದು ಬೆಂಗಳೂರಿನಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು.