5 ಗ್ಯಾರಂಟಿ ಯೋಜನೆ ಜಾರಿ ಖಚಿತ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿನಿತ್ಯ ಚರ್ಚೆಯಾಗುತ್ತಿದ್ದು, ಈ ಸಂಬಂಧ ಗಾಬರಿಯಾಗುವುದು ಬೇಡ. ಊಹಾಪೋಹಗಳಿಗೆ ಜನತೆ ಕಿವಿಗೊಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
Published: 29th May 2023 12:44 PM | Last Updated: 29th May 2023 02:25 PM | A+A A-

ಡಿಕೆ.ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿನಿತ್ಯ ಚರ್ಚೆಯಾಗುತ್ತಿದ್ದು, ಈ ಸಂಬಂಧ ಗಾಬರಿಯಾಗುವುದು ಬೇಡ. ಊಹಾಪೋಹಗಳಿಗೆ ಜನತೆ ಕಿವಿಗೊಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದರು.
ಯಾರು ಗಾಬರಿ ಆಗೋದು ಬೇಡ, ಊಹಾಪೋಹಗಳಿಗೆ ಕಿವಿಗೊಡೋದು ಬೇಡ. ನಾವು ಹೇಳಿದ್ದನ್ನೇ ಮಾಡುತ್ತೇವೆಂದು ಭರವಸೆ ನೀಡಿದರು.
ಯಾರು ಬೇಕಾದರೂ ಚರ್ಚೆ ಮಾಡಲಿ. ಬೈಯೋರು ಬೈಯಲಿ. ಎಲ್ಲರಿಗೂ ಮಾತಾಡೋಕೆ ವಾಕ್ ಸ್ವಾತಂತ್ರ್ಯ ಇದೆ ಎಂದು ಹೇಳಿದರು.
ಇದನ್ನೂ ಓದಿ: ಜೂನ್ 1ಕ್ಕೆ ಎರಡನೇ ಸಚಿವ ಸಂಪುಟ ಸಭೆ: ಅಂದೇ ಕಾಂಗ್ರೆಸ್ '5 ಗ್ಯಾರಂಟಿ' ಯೋಜನೆಗಳ ಜಾರಿ?
ಚುನಾವಣೆಯ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯನ್ನು ಕಾಂಗ್ರೆಸ್‍ನವರು 5 ಗ್ಯಾರಂಟಿಗಳನ್ನು ಘೋಷಿಸಿದ್ದರು. ಆದರೆ, ಚುನಾವಣೆ ಮುಗಿದು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಇಷ್ಟು ದಿನವಾದರೂ ಯಾವುದೇ ಗ್ಯಾಂಟಿಗಳನ್ನು ಜಾರಿಗೆ ತಂದಿಲ್ಲ.
ಈ ಮಧ್ಯೆ ಹಳ್ಳಿಗಳಲ್ಲಿನ ಜನತೆ ಕರೆಂಟ್ ಬಿಲ್ ಕಟ್ಟಲ್ಲವುದಿಲ್ಲವೆಂದು ಹಠಕ್ಕೆ ಬಿದ್ದಿದ್ದಾರೆ. ಅಲ್ಲದೆ ಬಿಲ್ ಕೇಳಲು ಹೋದ ಸಿಬ್ಬಂದಿ ಮೇಲೆ ಹಲ್ಲೆಯನ್ನೂ ಮಾಡುತ್ತಿದ್ದಾರೆ.
ಇತ್ತ ಮಹಿಳೆಯರು ಬಸ್ ಪ್ರಯಾಣ ಉಚಿತವೆಂದು ಕಾಂಗ್ರೆಸ್‍ನವರು ಹೇಳಿದ್ದಾರೆ. ಹೀಗಾಗಿ ಟಿಕೆಟ್ ತೆಗೆದುಕೊಳ್ಳಲ್ಲ ಎಂದು ನಿರ್ವಾಕರ ಮುಂದೆ ಜಗಳವಾಡುತ್ತಿರುವುದು ಕಂಡು ಬರುತ್ತಿದೆ.