
ಸಂಗ್ರಹ ಚಿತ್ರ
ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ನಂದಿ ಬೆಟ್ಟ ಪ್ರವಾಸಕ್ಕೆ ಬಂದಿದ್ದ ನಾಲ್ವರು ಯುವಕರು ನೀರು ಪಾಲಾಗಿರುವ ಘಟನೆ ದೇಹನಹಳ್ಳಿ ಸಮೀಪದ ರಾಮನಾಥಪುರ ಕೆರೆಯಲ್ಲಿ ನಡೆದಿದೆ.
ಬೈಕ್ನಲ್ಲಿ ಬಂದಿದ್ದ ಯುವಕರು ಬೆಂಗಳೂರಿಗೆ ವಾಪಸ್ ಮರಳುತ್ತಿರುವಾಗ ದಾರಿ ಮಧ್ಯೆ ಸಿಕ್ಕ ಕೆರೆಯಲ್ಲಿ ಈಜಲು ಹೋದಾಗ ದುರಂತ ಸಂಭವಿಸಿದೆ.
ಮೃತರನ್ನು ಫಿರೋಜ್ ಖಾನ್, ಶಹೀದ್ ಇಸ್ಮಾಯಿಲ್, ಶೇಖ್ ತಾಹಿರ್, ತೋಹಿದ್ ಮುನೀರ್ ಎಂದು ಗುರ್ತಿಸಲಾಗಿದೆ.
ಕೆರೆ ದಡದಲ್ಲಿ ಬಟ್ಟೆಗಳನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮೃತದೇಹ ಪತ್ತೆಗೆ ಶೋಧ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಮತ್ತಿಬ್ಬರ ಮೃತದೇಹ ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.