ಮೈಸೂರು ಬಳಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಮೈಸೂರು ಜಿಲ್ಲೆಯ ಟಿ ನರಸೀಪುರ ಬಳಿ 10 ಅಮಾಯಕರ ಸಾವಿಗೆ ಕಾರಣವಾದ ಭೀಕರ ಅಪಘಾತದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಿಎಂ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ಕೊಳ್ಳೇಗಾಲ- ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com