ಆಟೋ ಚಾಲಕನ ಮನೆಯಲ್ಲಿ ದರೋಡೆ ಪ್ರಕರಣ: ಇಬ್ಬರ ಬಂಧನ

ಆಟೋ ಚಾಲಕನ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯ ಪೈಕಿ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಆಟೋ ಚಾಲಕನ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯ ಪೈಕಿ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಪ್ರೀತಂ ಅಲಿಯಾಸ್ ಅಪ್ಪು (21), ರಂಜಿತ್ (22) ಮತ್ತು ವಿನಯ್ ಕುಮಾರ್ (19) ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳಾದ ಪ್ರವೀಣ್, ಅಲ್ತಾಫ್, ಭರತ್ ಮತ್ತು ಮನೋಜ್ ತಲೆಮರೆಸಿಕೊಂಡಿದ್ದು, ಇವರ ಪತ್ತೆಗೆ ಪೊಲೀಸರೂ ಬಲೆ ಬೀಸಿದ್ದಾರೆ.

ಮೇ 26ರ ಮಧ್ಯರಾತ್ರಿ ಕಾಮಾಕ್ಷಿಪಾಳ್ಯದಲ್ಲಿರುವ ಆಟೋ ಚಾಲಕ ನಾಗೇಶ್ ಅವರ ಮನೆಗೆ ನುಗ್ಗಿರುವ ಆರೋಪಿಗಳು, ನಾಗೇಶ್ ಅವರ ಮೇಲೆ ಹಲ್ಲೆ ನಡೆಸಿ ಬಂದೂಕು ತೋರಿಸಿ ಬೆದರಿಸಿದ್ದರು. ಬಳಿಕ ಮನೆಯಲ್ಲಿದ್ದ ಫೋನ್, ಚಿನ್ನಾಭರಣ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡು ಬೇಟೆ ಆರಂಭಿಸಿದ ಪೊಲೀಸರು ಇದೀಗ ಮೂವರನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಹೆಬ್ಬಗೋಡಿ ಪೊಲೀಸರು ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಅಂತಾರಾಜ್ಯ ದರೋಡೆಕೋರರನ್ನು ಬಂಧನಕ್ಕೊಶಪಡಿಸಿದ್ದಾರೆ.

ಆರೋಪಿಗಳನ್ನು ತಮಿಳುನಾಡು ಮೂಲದ ಶರವಣ (39) ಮತ್ತು ದಿನೇಶ್ (33) ಎಂದು ಗುರುತಿಸಲಾಗಿದೆ.

ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ ಹಕ್ಕು ಚಲಾಯಿಸಲು ಮನೆ ಮಾಲೀಕರು ಹೊರ ಹೋಗಿದ್ದರು. ಈ ವೇಳೆ ಮನೆಗೆ ನುಗ್ಗಿದ್ದ ಆರೋಪಿಗಳು, ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಪ್ರಕಱಣ ಸಂಬಂಧ ಇದೀಗ ಇಬ್ಬರನ್ನು ಬಂಧನಕ್ಕೊಳಪಡಿಸಿದ್ದು, ಆರೋಪಿಗಳಿಂದ ಸುಮಾರು 9 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com