ಇಂದೋರ್'ನಲ್ಲಿ ರಾಜ್ಯಪಾಲ ಗೆಹ್ಲೋಟ್: ಖಾತೆ ಹಂಚಿಕೆ ಮತ್ತಷ್ಟು ವಿಳಂಬ?
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದೋರ್'ಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಚಿವರ ಖಾತೆ ಹಂಚಿಕೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Published: 29th May 2023 08:55 AM | Last Updated: 29th May 2023 08:55 AM | A+A A-

ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದೋರ್'ಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಚಿವರ ಖಾತೆ ಹಂಚಿಕೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ರಾಜ್ಯಪಾಲರು ಮಧ್ಯಪ್ರದೇಶದ ಇಂದೋರ್'ಗೆ ಖಾಸಗಿ ಭೇಟಿ ನೀಡಿದ್ದು, ಇಂದು ಬೆಳಿಗ್ಗೆ ವಿಮಾನದಲ್ಲಿ ಬೆಂಗಳೂರಿಗೆ ಮರಳುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.
ರಾಜ್ಯಪಾಲರು ರಾಜ್ಯಕ್ಕೆ ಮರಳುತ್ತಿದ್ದಂತೆಯೇ ಖಾತೆ ಹಂಚಿಕ ಅನುಮೋದನೆ ನೀಡುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.
ಈಗಾಗಲೇ ಖಾತೆ ಹಂಚಿಕೆಯ ಪ್ರತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ರವಾನಿಸಿದ್ದು, ಇಂದು ರಾಜ್ಯಪಾಲರು ಇದಕ್ಕೆ ಅನುಮೋದನೆ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಖಾತೆ ಹಂಚಿಕೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಸಚಿವರಿಗೆ ಖಾತೆಗಳನ್ನು ಯಾವಾಗ ಹಂಚಿಕೆ ಮಾಡಲಾಗುತ್ತದೆ ಎಂಬುದು ನನಗೆ ತಿಳಿದಿಲ್ಲ ಎಂದು ಹೇಳಿದ್ದರು.