5-10ನೇ ತರಗತಿ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಠ ವರ್ಗಗಳ ಕಲ್ಯಾಣ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ ಎಂದಿದ್ದಾರೆ.

ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS IDಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ https://shp.karnataka.gov.in ಇಲ್ಲಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸುವಂತೆ ತಿಳಿಸಿದ್ದಾರೆ.

ಐದನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-06-2023 ಆಗಿರುತ್ತದೆ. ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ SATS IDಯನ್ನು ಪ್ರಸಕ್ತ ಶಾಲೆಯಲ್ಲಿ ಸಂಬಂಧಿಸಿದ ಮಾಹಿತಿಯನ್ನು ಇಂಧೀಕರಿಸಿ ಅರ್ಜಿ ಸಲ್ಲಿಸುವಂತೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com