5 ಗ್ಯಾರಂಟಿಗಳ ಜಾರಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ; ಹಲವು ಮಾಹಿತಿಗಳ ಸಂಗ್ರಹ
ಕಾಂಗ್ರೆಸ್ ಪಕ್ಷ ನೀಡಿದ್ದ 5 'ಗ್ಯಾರಂಟಿಗಳ' ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದು, ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು.
Published: 30th May 2023 12:35 AM | Last Updated: 30th May 2023 02:09 PM | A+A A-

ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ 5 'ಗ್ಯಾರಂಟಿಗಳ' ಜಾರಿ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದು, ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು.
ಹೌದು.. ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಗೃಹಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಯುವ ನಿಧಿ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ಯೋಜನೆಗಳನ್ನು ಚುನಾವಣೆಗೆ ಮುನ್ನ ಘೋಷಿಸಲಾಗಿತ್ತು.
ಕಾಂಗ್ರೆಸ್ ಪಕ್ಷದ ಪ್ರಮುಖ "5 ಗ್ಯಾರಂಟಿ" ಯೋಜನೆಗಳ ಅನುಷ್ಠಾನದ ಕುರಿತು ಮುಖ್ಯಮಂತ್ರಿ @siddaramaiah ಅವರು ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದರು. pic.twitter.com/GPax5lsx47
— CM of Karnataka (@CMofKarnataka) May 29, 2023
ಸಿಎಂ ಸಿದ್ದರಾಮಯ್ಯ ಅವರು ಇಂದು (ಮೇ.29) ಆಹಾರ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಕುರಿತು ಹಣಕಾಸು, ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು, ಇಂಧನ ಮತ್ತಿತರ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿಯವರು ಯೋಜನೆಗಳನ್ನು ಜಾರಿಗೊಳಿಸುವ ವಿಚಾರದಲ್ಲಿ ವರದಿಯೊಂದನ್ನು ಸಿದ್ಧಪಡಿಸುವಂತೆ ತಿಳಿಸಿದರು.
ಇದನ್ನೂ ಓದಿ: ಪೋಟೋ, ವಿಡಿಯೋ ಸಮೇತ ಕಾಮಗಾರಿ ವಿವರ ನೀಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಖಡಕ್ ಸೂಚನೆ
ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಯವರು ಬುಧವಾರ ಎಲ್ಲ ಸಚಿವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಗುರುವಾರ ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಯೋಜನೆಗಳನ್ನು ಯಾವ ರೀತಿ ಜಾರಿಗೊಳಿಸಬಹುದು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಗ್ಯಾರಂಟಿಗಳ ಜಾರಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಬರುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಲಾಗಿತ್ತು. ಜೂನ್ ಒಂದರಂದು ಸಂಪುಟ ಸಭೆಯಲ್ಲಿ ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಆದೇಶ ಹೊರಡಿಸುವ ಸಾಧ್ಯತೆ ಇರುವುದರಿಂದ ಅಂಕಿ-ಅಂಶಗಳ ಮೇಲೆ ಅವರು ಅಧ್ಯಯನ ನಡೆಸಲಿದ್ದಾರೆ.
ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್ ನಿಂದ ಜನತೆಗೆ ದೋಖಾ: ಬಸವರಾಜ ಬೊಮ್ಮಾಯಿ
ಸಿಎಂಗೆ ಅಧಿಕಾರಿಗಳಿಂದ ಮಾಹಿತಿ
ಉಚಿತ ವಿದ್ಯುತ್ ಯೋಜನೆಯಿಂದ 2.14 ಕೋಟಿ ಕುಟುಂಬಗಳಿಗೆ ಅನುಕೂಲವಾಗಿದೆ. ವಾರ್ಷಿಕ ಬಳಕೆಗೆ ಅಂದಾಜು 13,575 ಮಿಲಿಯನ್ ಯೂನಿಟ್ ಬೇಕು. ಈ ಯೋಜನೆಗೆ ಇಂಧನ ಶುಲ್ಕ ಅಂದಾಜು 8,008 ಕೋಟಿ ರೂ. ತಗಲುತ್ತದೆ. ಯೋಜನೆಗೆ ಒಟ್ಟು 12,038 ಕೋಟಿ ರೂಪಾಯಿ ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.