ಸಾಹಿತಿ ಬರಹಗಾರರ ವಿರುದ್ಧದ ಸುಳ್ಳು ಮೊಕದ್ದಮೆ ವಾಪಸ್, ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯಗಳಿಗೆ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ
ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Published: 30th May 2023 12:48 AM | Last Updated: 30th May 2023 02:11 PM | A+A A-

ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆ
ಬೆಂಗಳೂರು: ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ ಸುಮಾರು 40 ಕ್ಕೂ ಹೆಚ್ಚು ಮಂದಿ ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 'ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಭರವಸೆ ನೀಡಿದರು.
ಕನ್ನಡ ನಾಡಿನ ಹೆಸರಾಂತ ಸಾಹಿತಿಗಳು, ಬರಹಗಾರರು ಮತ್ತು ನಾನಾ ಜನಪರ ಸಂಘಟನೆಗಳ ಮುಖಂಡರ ಜತೆ ಮುಖ್ಯಮಂತ್ರಿ @siddaramaiah ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಚರ್ಚಿಸಿದರು. pic.twitter.com/py2a0vdDYK
— CM of Karnataka (@CMofKarnataka) May 29, 2023
'ಕನ್ನಡ ನಾಡಿನ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು. ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ, ಈ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಈ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ: 5 'ಗ್ಯಾರಂಟಿಗಳ' ಜಾರಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ; ಹಲವು ಮಾಹಿತಿಗಳ ಸಂಗ್ರಹ
ಸುಳ್ಳು ಮೊಕದ್ದಮೆ ವಾಪಸ್
ಸಾಹಿತಿ, ಬರಹಗಾರ, ಕನ್ನಡ ಹೋರಾಟಗಾರರು, ದಲಿತ ಚಳವಳಿಗಳ ಹೋರಾಟಗಾರರು, ರೈತ-ಕಾರ್ಮಿಕರ ಮೇಲೆ ಹಾಕಿದ್ದ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು. ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಚರ್ಚಿಸಿ ನಿಷ್ಠುರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಇದನ್ನೂ ಓದಿ: ಗ್ಯಾರಂಟಿ ಅನುಷ್ಠಾನದಲ್ಲಿ ಕಾಂಗ್ರೆಸ್ ನಿಂದ ಜನತೆಗೆ ದೋಖಾ: ಬಸವರಾಜ ಬೊಮ್ಮಾಯಿ
ಅಲ್ಲದೆ ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು, ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ. ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಸಾಹಿತಿ ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅಗತ್ಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು.