ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ: ದಿನೇಶ್ ಗುಂಡೂರಾವ್

ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Updated on

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಆರೋಪಗಳ ಕುರಿತು ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಇತ್ತೀಚಿಗೆ ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ಇಂದು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಎಲ್ಲಾ ಇಲಾಖೆಗಳಲ್ಲಿ ಪರಿಶೀಲನೆ ನಡೆಸಲಾಗುವುದು, ಒಂದು ವೇಳೆ ಭ್ರಷ್ಟಾಚಾರದಿಂದ ಏನಾದರೂ ನಷ್ಟವಾಗಿದ್ದರೆ ಮತ್ತು ಖಜಾನೆ ಮತ್ತು ಸಂಪನ್ಮೂಲಗಳ ವ್ಯರ್ಥವಾಗಿರುವುದು ಕಂಡುಬಂದರೆ ಖಂಡಿತವಾಗಿ  ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಇದೇ ವೇಳೆ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾತನಾಡಿದ ಅವರು, ಇತಿಹಾಸವನ್ನು ವಿರೂಪಗೊಳಿಸಿರುವುದರಿಂದ, ಒಂದು ಸಿದ್ದಾಂತವನ್ನು ಮನಸ್ಸಿನಲ್ಲಿಟ್ಟುಕೊಂಡು ಪಠ್ಯ ಪುಸ್ತಕ ಬರೆದಿರುವುದರಿಂದ ಅವುಗಳನ್ನು ತೆಗೆದುಹಾಕಬೇಕಾಗಿದೆ. ಇತಿಹಾಸ ನೈಜ ಅಂಶಗಳಿಂದ ನಾವು ನೋಡಬೇಕಾಗಿದೆ, ಕಾಲ್ಪನಿಕವಲ್ಲ ಎಂದು ಅವರು ತಿಳಿಸಿದರು.

ಇದು ತನ್ನ ಕ್ಷೇತ್ರವಾಗಿದ್ದು, ಕೆಲ ಪ್ರವಾಹ ಮತ್ತು ನೀರಿನ ಸಮಸ್ಯೆಗಳಿವೆ. ಹೊಸ ಚರಂಡಿಯನ್ನು ನಿರ್ಮಿಸಬೇಕಾಗಿದೆ. ಹಾಗಾಗಿ ಪರಿಶೀಲನೆ ನಡೆಸುತ್ತಿದ್ದೇನೆ. ಇದು ನನ್ನ ಕ್ಷೇತ್ರದ ಅಭಿವೃದ್ಧಿಯಾಗಿದ್ದು, ಆರೋಗ್ಯ ಇಲಾಖೆಗೆ ಯಾವುದೇ ಸಂಬಂಧವಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com