'ಭ್ರಷ್ಟ' ಬಿಡಿಎಯನ್ನು ಸ್ವಚ್ಛಗೊಳಿಸುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು (ಬಿಡಿಎ) ಭ್ರಷ್ಟಾಚಾರದಿಂದ ಮುಕ್ತಗೊಳಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಹೇಳಿದರು.
ಸಭೆಯಲ್ಲಿ ಮಾಹಿತಿ ಪಡೆದುಕೊಳ್ಳುತ್ತಿರುವ ಡಿಕೆ.ಶಿವಕುಮಾರ್.
ಸಭೆಯಲ್ಲಿ ಮಾಹಿತಿ ಪಡೆದುಕೊಳ್ಳುತ್ತಿರುವ ಡಿಕೆ.ಶಿವಕುಮಾರ್.

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವನ್ನು (ಬಿಡಿಎ) ಭ್ರಷ್ಟಾಚಾರದಿಂದ ಮುಕ್ತಗೊಳಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಸೋಮವಾರ ಹೇಳಿದರು.

ನಿನ್ನೆಯಷ್ಟೇ ಬಿಡಿಎ ಅಧಿಕಾರಿಗಳೊಂದಿಗೆ ಡಿಕೆ.ಶಿವಕುಮಾರ್ ಅವರು ಪ್ರಗತಿ ಪರಿಶೀಲನಾ ಸಭೆ ನಡೆಸಿದರು. 2 ಗಂಟೆಗಳ ಕಾಲ ಅಧಿಕಾರಿಗಳೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈಗಾಗಲೇ ಆದೇಶ ಹೊರಡಿಸಿದ್ದಾರೆ. ಎಲ್ಲೆಡೆ ಭ್ರಷ್ಟ ಅಧಿಕಾರಿಗಳಿದ್ದಾರೆ. ಅವರಲ್ಲಿ ಬಹುತೇಕ ಅಧಿಕಾರಿಗಳನ್ನು ಬದಲಿಸಲಾಗುವುದು ಎಂದು ಹೇಳಿದರು.

‘ಬೆಂಗಳೂರಿನಲ್ಲಿ ಬದಲಾವಣೆ ತರಬೇಕು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು, ಬಿಡಿಎ ಹಾಗೂ ಪ್ರತಿ ಟೇಬಲ್‌ನಿಂದಲೂ ಹಣಕ್ಕೆ ಬೇಡಿಕೆ ಇದೆ ಎಂಬ ಮಾಹಿತಿ ಸಿಕ್ಕಿದೆ. ಇನ್ನು ಮುಂದೆ ಅದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಬಿಡಿಎಯ ಎಲ್ಲ ಚಾಲ್ತಿ ಯೋಜನೆಗಳ ವಿವರ ಸಿಕ್ಕಿದ್ದು, ದಿಕ್ಕು ತೋಚದಂತಿರುವಂತೆ ತೋರುತ್ತಿದೆ. ಒಂದಿಷ್ಟು ಕೆಲಸಗಳಾಗಬೇಕು, ಸಂಚಾರ ದಟ್ಟಣೆ ಇರುವ ಪ್ರದೇಶಗಳನ್ನು ಗುರುತಿಸಿ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅದನ್ನು ಸುಧಾರಿಸಲು ಬಿಡಿಎ ಕೆಲವು ಯೋಜನೆಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದರು.

ಭ್ರಷ್ಟಾಚಾರದಿಂದ ಬಿಡಿಎಯನ್ನು ಸ್ವಚ್ಛಗೊಳಿಸುವುದಾಗಿ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಒತ್ತಿ ಹೇಳಿದರು. ಇನ್ನು ಮುಂದೆ ಯಾವುದೇ ಅಕ್ರಮಕ್ಕೆ ಅವಕಾಶ ನೀಡುವುದಿಲ್ಲ. ಯಾವುದೇ ಅಕ್ರಮದಲ್ಲಿ ತೊಡಗಿಸಿಕೊಳ್ಳುವ ಬದಲು ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರುವಂತೆ ಸೂಚಿಸಿದರು ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ಮಾಸ್ಟರ್ ಪ್ಲಾನ್ (ಆರ್‌ಎಂಪಿ 2041) ಮತ್ತು ಪೆರಿಫೆರಲ್ ರಿಂಗ್ ರೋಡ್ (ಪಿಆರ್‌ಆರ್) ಯೋಜನೆಗೆ ಆದ್ಯತೆ ನೀಡಬೇಕು. "ಬಿಡಿಎ ತನ್ನ ವಾಣಿಜ್ಯ ಸಂಕೀರ್ಣಗಳಂತಹ ಇತರ ಆದಾಯವನ್ನು ಗಳಿಸುವ ಆಯ್ಕೆಗಳ ಮೇಲೆ ಕೇಂದ್ರೀಕರಿಸುವ ಮೂಲಕ ತನ್ನನ್ನು ತಾನೇ ಸ್ವಾವಲಂಬಿಯನ್ನಾಗಿ ಮಾಡಬೇಕೆಂದು. ಎಲ್ಲಾ ಯೋಜನೆಗಳನ್ನು ವಿಶೇಷವಾಗಿ ಅರ್ಕಾವತಿ ಲೇಔಟ್ ತ್ವರಿತಗೊಳಿಸಬೇಕು, ಇದರಿಂದ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರದಲ್ಲೇ ನ್ಯಾಯ ಸಿಗುತ್ತದೆ. ಬೆಂಗಳೂರು ಪ್ರತಿಷ್ಠಿತ ಬ್ರ್ಯಾಂಡ್ ಆಗಬೇಕು ಮತ್ತು ಅದನ್ನು ನಿರ್ಮಿಸುವಲ್ಲಿ ಬಿಡಿಎ ಪ್ರಮುಖ ಪಾತ್ರ ವಹಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಶಿವಕುಮಾರ್ ಸೂಚಿಸಿದರು ಎಂದು ಮೂಲವೊಂದು ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com