ಪಂಚಾಯಿತಿ ಮಟ್ಟದಲ್ಲಿ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆ ಆರಂಭ: ಡಿಕೆ.ಶಿವಕುಮಾರ್
ರಾಜ್ಯದ ಪ್ರತಿ ಪಂಚಾಯತಿ ಮಟ್ಟದಲ್ಲಿಯೂ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆಯ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದರು.
Published: 30th May 2023 09:54 AM | Last Updated: 30th May 2023 12:29 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯದ ಪ್ರತಿ ಪಂಚಾಯತಿ ಮಟ್ಟದಲ್ಲಿಯೂ ನವೋದಯ ಮಾದರಿ ಉನ್ನತ ಗುಣಮಟ್ಟದ ಶಾಲೆಯ ಆರಂಭಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಹೇಳಿದರು.
ತಾವು ಓದಿದ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಗೆ ಸೋಮವಾರ ಭೇಟಿ ನೀಡಿದ ಅವರು, ತಮ್ಮ ಶಿಕ್ಷಕ ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಾಯಿತಿ ಮಟ್ಟದಲ್ಲಿ ನಮೋದಯ ಮಾದರಿ ಉನ್ನದ ಗುಣಮಟ್ಟದ ಶಾಲೆಗಳ ಆರಂಬಿಸಲು ಚಿಂತನೆಗಲು ನಡೆಯುತ್ತಿವೆ. ಈ ಕುರಿತು ಚುನಾವಣಾ ಪ್ರಣಾಳಿಕೆಯಲ್ಲಿಯೂ ತಿಳಿಸಿದ್ದೆವು. ಈ ನಿಟ್ಟಿನಲ್ಲಿ ನಾನು ಪರಮೇಶ್ವರ್ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವರ ಜೊತೆಗೆ ಸಮಗ್ರ ಚರ್ಚೆ ನಡೆಸುತ್ತೇವೆ. ಮಾಜಿ ಶಿಕ್ಷಕರಿಂದಲೂ ಸಲಹೆಗಳನ್ನು ಪಡೆಯುತ್ತೇವಂದು ಹೇಳಿದರು.
ಇದನ್ನೂ ಓದಿ: ಮೇ 31 ರಿಂದ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಶಾಲೆಗಳು ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮಕ್ಕಳು ತಮ್ಮ ಹಳ್ಳಿಗಳಿಂದ ನಗರಗಳಿಗೆ ವಲಸೆ ಹೋಗಬಾರದು ಎಂಬುದನ್ನು ಖಚಿತಪಡಿಸಿಕೊಳ್ಳಲು ಇಂತಹ ಶಾಲೆಗಳನ್ನು ಆರಂಭಿಸಲು ಚಿಂತನೆಗಳ ನಡೆಸಲಾಗುತ್ತಿದೆ. 'ಹಳ್ಳಿ ಜನರಿಗೂ ಕೂಡ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಹಂಬಲವಿದೆ. ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಬೇಕು. ಇದು ನಮ್ಮ ಸರ್ಕಾರದ ಆದ್ಯತೆ'' ಎಂದು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ಪ್ರಣಾಳಿಕೆ ಭರವಸೆ ಜಾರಿ ಅಸಾಧ್ಯ ಎಂಬ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಪ್ರತಿಕ್ರಿಯಿಸಿದ ಅವರು, "ಯಾವುದೇ ಊಹಾಪೋಹಗಳ ಅಗತ್ಯವಿಲ್ಲ. ಚರ್ಚೆ ಮಾಡುವವರಿಗೆ, ಟೀಕೆ ಮಾಡುವವರಿಗೆ, ಸಲಹೆ ನೀಡುವವರಿಗೆ ಬೇಡ ಎನ್ನಲು ಸಾಧ್ಯವಿಲ್ಲ. ಮಾತನಾಡುವವರು, ಟೀಕೆ ಮಾಡುವವರು ಮಾಡಲಿ. ನಾವು ಕೆಲಸ ಮಾಡಿ ಉತ್ತರ ನೀಡುತ್ತೇವೆ" ಎಂದು ತಿರುಗೇಟು ನೀಡಿದರು.