ಬೆಳಗಾವಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ: ಇಬ್ಬರಿಗೆ ಗಾಯ
ಬೆಳಗಾವಿ: ತರಬೇತಿ ವಿಮಾನವೊಂದು ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದ ಮೋದಗಾ, ಬಾಗೇವಾಡಿ ರಸ್ತೆ ರಸ್ತೆ ಬದಿಯ ಹೊಲದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ತರಬೇತುದಾರ ವಿಮಾನವು ಟೇಕಾಫ್ ಆಗಿದ್ದು, ಕೆಲವು ನಿಮಿಷಗಳ ನಂತರ ತಾಂತ್ರಿಕ ದೋಷ ಕಂಡು ಬಂದ ನಂತರ ಅದನ್ನು ಮೈದಾನಕ್ಕೆ ಇಳಿಸಲಾಯಿತು.
ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸಾಂಬ್ರಾ ವಿಮಾನ ನಿಲ್ದಾಣ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ರೆಡ್‌ಬರ್ಡ್ ಸಂಸ್ಥೆಗೆ ಸೇರಿದ ವಿಟಿ-ಆರ್ ಬಿಎಫ್ ತರಬೇತಿ ವಿಮಾನ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟಿತ್ತು.
ಇದರಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಒಬ್ಬ ತರಬೇತುದಾರರ ಕಾಲಿಗೆ ಗಾಯಗಳಾಗಿದ್ದು, ವಿಮಾನದಲ್ಲಿದ್ದ ಇನ್ನೊಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಪೊಲೀಸರು ಮತ್ತು ಭಾರತೀಯ ವಾಯುಪಡೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಈ ಕುರಿತು ಮಾರಿಹಾರಳ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ