ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಬಿ ದಯಾನಂದ್ ಅಧಿಕಾರ ಸ್ವೀಕಾರ: ಸಂಚಾರ ನಿರ್ವಹಣೆ, ಸೈಬರ್ ಕ್ರೈಮ್ ಗೆ ಆದ್ಯತೆ
ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಇಂದು ಮೇ 31 ಬುಧವಾರ ಬಿ ದಯಾನಂದ ನಾಯಕ್ ಅವರು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಕಮಿಷನರ್ ಸಿ.ಎಚ್. ಪ್ರತಾಪ್ ರೆಡ್ಡಿ ಅವರು ಅಧಿಕೃತವಾಗಿ ಲಾಠಿ ಹಸ್ತಾಂತರಿಸಿದರು.
Published: 31st May 2023 12:04 PM | Last Updated: 31st May 2023 02:34 PM | A+A A-

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಬಿ ದಯಾನಂದ್
ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಇಂದು ಮೇ 31 ಬುಧವಾರ ಬಿ ದಯಾನಂದ ನಾಯಕ್ ಅವರು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಕಮಿಷನರ್ ಸಿ.ಎಚ್. ಪ್ರತಾಪ್ ರೆಡ್ಡಿ ಅವರು ಅಧಿಕೃತವಾಗಿ ಲಾಠಿ ಹಸ್ತಾಂತರಿಸಿದರು.
ಅಧಿಕಾರ ಸ್ವೀಕರಿಸಿದ ಬಿ. ದಯಾನಂದ ಅವರು ಬೆಂಗಳೂರಿನಲ್ಲಿ ಸಂಚಾರ ನಿರ್ವಹಣೆ ಮತ್ತು ಸೈಬರ್ ಕ್ರೈಮ್ ಮೇಲೆ ಆದ್ಯತೆಯಿಂದ ಗಮನ ಹರಿಸುವುದಾಗಿ ಹೇಳಿದ್ದಾರೆ.
ಅಧಿಕಾರ ವಹಿಸಿಕೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದಯಾನಂದ ಅವರು, ಪೊಲೀಸ್ ಇಲಾಖೆ ಮೇಲೆ ಜನರಿಗೆ ನಂಬಿಕೆ ಇದೆ, ಆ ನಂಬಿಕೆ ಉಳಿಸಿಕೊಳ್ಳಲು ಶ್ರಮಿಸುತ್ತೇನೆ. ಪೊಲೀಸ್ ಆಯುಕ್ತರಾಗಿ ಬೆಂಗಳೂರಿಗೆ ಸಂಬಂಧಪಟ್ಟಂತೆ ಹಲವು ಸವಾಲುಗಳಿದ್ದು, ಅವುಗಳನ್ನು ಆದ್ಯತೆ ಮೇಲೆ ತೆಗೆದುಕೊಳ್ಳಲಾಗುವುದು. ನಗರದಲ್ಲಿ ಸಂಚಾರ ನಿರ್ವಹಣೆಗೆ ನಾಗರಿಕ ಸಂಸ್ಥೆಗಳಿಂದ ಸಮನ್ವಯತೆ ಅಗತ್ಯ. ಸಂಚಾರ ದಟ್ಟಣೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಇಲಾಖೆಯು ಏಜೆನ್ಸಿಗಳೊಂದಿಗೆ ಕೆಲಸ ಮಾಡುತ್ತದೆ ಎಂದರು.
ಟೋಯಿಂಗ್ ವ್ಯವಸ್ಥೆಯನ್ನು ಹಿಂಪಡೆಯುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಇಲಾಖೆಯು ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದರು.
ಸೈಬರ್ ಕ್ರೈಂ ಸವಾಲು: ಸೈಬರ್ ಕ್ರೈಂ ಬೆಂಗಳೂರಿನಲ್ಲಿ ಪೊಲೀಸರಿಗೆ ಮತ್ತೊಂದು ಸವಾಲಾಗಿದೆ. ಸೈಬರ್ ಕ್ರೈಂ ಠಾಣೆಗಳಲ್ಲಿ ಪ್ರಕರಣಗಳ ಮಿತಿಮೀರಿದ್ದು, ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತನಿಖೆ ಮಾಡಲು ಪೊಲೀಸರಿಗೆ ತರಬೇತಿಯ ಅಗತ್ಯವಿದೆ. ಸೈಬರ್ ಅಪರಾಧ ಪ್ರಕರಣಗಳನ್ನು ಸಾಮಾನ್ಯ ಠಾಣೆಗಳಲ್ಲಿ ನಿರ್ವಹಿಸಲು ಅಗತ್ಯವಿರುವ ತರಬೇತಿಯನ್ನು ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವುದು. ಸೈಬರ್ ಕ್ರೈಂ ಪೊಲೀಸ್ ಸಿಬ್ಬಂದಿ ಮೇಲಿನ ಹೊರೆಯನ್ನು ಕಡಿಮೆ ಮಾಡಬೇಕಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ದಯಾನಂದ್ ಅವರು 1994ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
B Dayananda, the 1994 batch IPS officer takes charge as @CPBlr on Wednesday @santwana99 @ramupatil_TNIE @Cloudnirad @praveen3537 @XpressBengaluru @KannadaPrabha @AiyshwaryaM @AshwiniMS_TNIE @balachauhan @BoskyKhanna @CMofKarnataka pic.twitter.com/sDDNWNimpQ
— Nagaraja Gadekal (@gadekal2020) May 31, 2023
Heartily welcome @bdayananda as the new @CPBlr to take over the leadership of @BlrCityPolice.
— Pratap Reddy, IPS ಪೊಲೀಸ್ ಆಯುಕ್ತರು, ಬೆಂಗಳೂರು ನಗರ (@CPBlr) May 30, 2023
Thank my team and citizens of #NammaBengaluru for their cooperation.
Been a privilege to serve you all & this great city!!