ಬೆಂಗಳೂರಿನಲ್ಲಿ ಮಳೆ ಅಬ್ಬರ: ಡಿಸಿಎಂ ಆದೇಶದ ಮೇರೆಗೆ ಯಂತ್ರೋಪಕರಣಗಳ ಸಜ್ಜುಗೊಳಿಸಿದ ಬಿಬಿಎಂಪಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮಳೆಯಿಂದಾಗಿ ಎದುರಾಗುವ ಪ್ರವಾಹ ಪರಿಸ್ಥಿತಿಗಳ ಎದುರಿಸಲು ಬಿಬಿಎಂಪಿ ಯಂತ್ರೋಪಕರಣಗಳ ಸಜ್ಜುಗೊಳಿಸುತ್ತಿದೆ.
Published: 31st May 2023 09:15 AM | Last Updated: 31st May 2023 02:22 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮಳೆಯಿಂದಾಗಿ ಎದುರಾಗುವ ಪ್ರವಾಹ ಪರಿಸ್ಥಿತಿಗಳ ಎದುರಿಸಲು ಬಿಬಿಎಂಪಿ ಯಂತ್ರೋಪಕರಣಗಳ ಸಜ್ಜುಗೊಳಿಸುತ್ತಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿರ್ದೇಶನದಂತೆ ಸಿದ್ಧತೆಗಳ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.
ಎಲ್ಲಾ ವಲಯ ಆಯುಕ್ತರು, ಜಂಟಿ ಆಯುಕ್ತರು, ಮುಖ್ಯ ಇಂಜಿನಿಯರ್‌ಗಳು, ಕಾರ್ಯನಿರ್ವಾಹಕ ಇಂಜಿನಿಯರ್‌ಗಳು ಮತ್ತು ಅರಣ್ಯ ವಿಭಾಗದ ಅಧಿಕಾರಿಗಳು ಕ್ಷೇತ್ರದಲ್ಲಿ ಹೆಚ್ಚಿನ ಜಾಗರೂಕರಾಗಿರುವಂತೆ ಮತ್ತು ನಿರಂತರವಾಗಿ ಮಳೆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ನಿರ್ದೇಶಿಸಲಾಗಿದೆ. ಯಂತ್ರೋಪಕರಣಗಳನ್ನು ಸಿದ್ಧವಾಗಿರುವಂತೆ, ಯಾವುದೇ ಸಮಯದಲ್ಲಿ ಯಾವುದೇ ರೀತಿಯ ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಪೋಟೋ, ವಿಡಿಯೋ ಸಮೇತ ಕಾಮಗಾರಿ ವಿವರ ನೀಡಿ: ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಖಡಕ್ ಸೂಚನೆ
ಉಪ ಮುಖ್ಯಮಂತ್ರಿಗಳ ಆದೇಶದಂತೆ ನಿಯಂತ್ರಣ ಕೊಠಡಿಗಳು ವಲಯದಿಂದ ಉಪ-ವಿಭಾಗ ಮಟ್ಟದವರೆಗೆ 2*7 ಕಾರ್ಯನಿರ್ವಹಿಸುತ್ತಿವೆ. ಅಗತ್ಯ ಉಪಕರಣಗಳು, ವಾಹನಗಳು ಮತ್ತು ಇತರ ಸಾಮಗ್ರಿಗಳು ಸನ್ನದ್ಧ ಸ್ಥಿತಿಯಲ್ಲಿರಸಲಾಗುತ್ತಿದೆ. ಯಾವುದೇ ಸಿಬ್ಬಂದಿ ಅಸಡ್ಡೆ, ಆಲಸ್ಯ ಅಥವಾ ಬೇಜವಾಬ್ದಾರಿ ವರ್ತನೆ ತೋರಿದ್ದೇ ಆದರೆ, ಅಮಾನತು ಸೇರಿದಂತೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಚ್ಚರಿಕೆ ನೀಡಿದರು.