ಉಚಿತ ವಿದ್ಯುತ್ ಗ್ಯಾರಂಟಿ: ಇಲಾಖೆ ಅಧಿಕಾರಿಗಳೊಂದಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸಭೆ, ಮಾಹಿತಿ ಸಂಗ್ರಹ

ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಿಧಾನಸೌಧದಲ್ಲಿ ಮಂಗಳವಾರ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.
ಕೆಜೆ.ಜಾರ್ಜ್
ಕೆಜೆ.ಜಾರ್ಜ್

ಬೆಂಗಳೂರು: ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ವಿಧಾನಸೌಧದಲ್ಲಿ ಮಂಗಳವಾರ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು.

200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಗ್ಯಾರಂಟಿ ಯೋಜನೆ ಅನುಷ್ಠಾನದಿಂದಾಗುವ ಸಾಧಕ-ಬಾಧಕಗಳ ಬಗ್ಗೆಯೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ರಾಜ್ಯ ವಿಧಾನಸಭಾ ಚುನಾವಣಾ ಪೂರ್ವದಲ್ಲಿ 200 ಯೂನಿಟ್‍ವರೆಗೂ ಉಚಿತ ವಿದ್ಯುತ್ ಬಳಕೆಗೆ ಅವಕಾಶ ನೀಡುವ ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಿತ್ತು.

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗಳಿಸುವಂತೆ ಸಾರ್ವಜನಿಕರಿಂದ ಒತ್ತಡ ತೀವ್ರಗೊಂಡ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಸಚಿವರ ಸಭೆ ಕರೆದಿದ್ದಾರೆ.

ಸಭೆಗೆ ಪೂರಕ ಮಾಹಿತಿಯೊಂದಿಗೆ ಹಾಜರಾಗುವ ಉದ್ದೇಶದಿಂದ ಸಚಿವ ಜಾರ್ಜ್ ಅವರು, ಇಂಧನ ಇಲಾಖೆಯ ಹಿರಿಯ ಆಧಿಕಾರಿಗಳ ಜತೆ ಸಭೆ ನಡೆಸಿ ಅಂಕಿ-ಅಂಶಗಳ ಸಹಿತ ಮಾಹಿತಿ ಪಡೆದುಕೊಂಡರು.

ಪ್ರಸ್ತುತ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ವಿದ್ಯುತ್ತಿನ ಪ್ರಮಾಣ, ವಿದ್ಯುತ್ ಉತ್ಪಾದನೆ ಹೇಗಿದೆ, ಮುಂದಿನ ದಿನಗಳಲ್ಲಿ ವಿದ್ಯುತ್‍ನ ಬೇಡಿಕೆ ಎಷ್ಟರಿಲಿದೆ ಎಂಬ ಅಂದಾಜು, ಇಂಧನ ಇಲಾಖೆಯ ಪ್ರಸ್ತುತ ಸ್ಥಿತಿಗತಿ, ಉಚಿತ ವಿದ್ಯುತ್ ನೀಡುವುದರಿಂದ ಹೊರೆ ಎಷ್ಟಾಗಲಿದೆ, ಯಾರಿಗೆ ಉಚಿತ ವಿದ್ಯುತ್ ನೀಡಬಹುದು ಎಂಬ ಬಗ್ಗೆ ಸಮಗ್ರವಾಗಿ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡರು ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com