ರಾಗಿ ಬೆಳೆಗಾರರಿಗೆ ಹಣ ಪಾವತಿ ಸಮಸ್ಯೆ ತಕ್ಷಣ ಬಗೆಹರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
Published: 31st May 2023 01:08 PM | Last Updated: 31st May 2023 01:08 PM | A+A A-

ಗೃಹ ಕಚೇರಿ ಕೃಷ್ಣಾ ಬಳಿ ರೈತರನ್ನು ಭೇಟಿ ಮಾಡಿ ಅವಹಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ಕನಿಷ್ಠ ಬೆಂಬಲ ಬೆಲೆ(MSP) ಯೋಜನೆಯಡಿ ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯಗಳನ್ನು ಭೇಟಿ ಮಾಡಿ ರೈತರ ಸಮಸ್ಯೆಗಳನ್ನು ಆಲಿಸಿ ಅವರು ಅಹವಾಲುಗಳನ್ನು ಸ್ವೀಕರಿಸಿದರು.
ರಾಗಿ ಬೆಳೆಗಾರರಿಗೆ ಹಣ ಪಾವತಿಸುವಲ್ಲಿ ಆಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಿ ರೈತರಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.