
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದ್ದು, ಜೂನ್ 1 ರವರೆಗೆ ಹಳೆಯ ಬಸ್ ಪಾಸ್ ಬಳಸುವಂತೆ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ.
ನಿಗಮವು ಪ್ರತಿ 2023-24ನೇ ಸಾಲಿನ ವಿದ್ಯಾರ್ಥಿ ಉಚಿತ / ರಿಯಾಯಿತಿ ಬಸ್ ಪಾಸುಗಳನ್ನು ಇಡಿಸಿಎಸ್ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ ಸಂಪೂರ್ಣ ಯಾಂತ್ರೀಕೃತವಾಗಿ ವಿತರಣೆ ಮಾಡಲು ಕ್ರಮವಹಿಸಲಾಗುತ್ತಿದ್ದು, ಇಡಿಸಿಎಸ್ ಇಲಾಖೆಯು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.
ಇದನ್ನೂ ಓದಿ: ಬಿಎಂಟಿಸಿ 'ಉಚಿತ ಬಸ್ ಪಾಸ್' ಸ್ಥಗಿತ: ಸಂಕಷ್ಟದಲ್ಲಿ ಕಾರ್ಮಿಕರು
ಶಾಲೆಗಳು ಪುನಾರಂಭ: ವಿದ್ಯಾರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಹಾಗೂ ಪಾಸು ಪಡೆಯಲು ಕಾಲಾವಕಾಶ ನೀಡಬೇಕಿರುತ್ತದೆ. ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿಗಳಿಗೆ ಹಾಜರಾಗಲು ಯಾವುದೇ ಅನಾನುಕೂಲವಾಗದಂತೆ ಕ್ರಮವಹಿಸಬೇಕಿರುತ್ತದೆ.
ಈ ಸಂಬಂಧ ವಿದ್ಯಾರ್ಥಿಗಳಿಗೆ ಜೂನ್ 15ರವರೆಗೆ ಈ ಕೆಳಕಂಡ ದಾಖಲೆಗಳನ್ನು ನಿಗಮದ ಬಸ್ಸುಗಳಲ್ಲಿ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿ ಉಚಿತ/ ರಿಯಾಯಿತಿ ಬಸ್ ಪಾಸ್ ಮಾನ್ಯತೆ ಬಗ್ಗೆ: pic.twitter.com/ovBgDiKbrR
— KSRTC (@KSRTC_Journeys) May 31, 2023