ಯೋಜನೆಗಳ ಕಾಮಗಾರಿ ಹೆಸರಿನಲ್ಲಿ ಅಪಾರ ಪ್ರಮಾಣದ ಹಣ ದುರ್ಬಳಕೆ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸವದಿ
ನೀರಾವರಿ ಇಲಾಖೆಯಿಂದ ಕೈಗೆತ್ತಿಕೊಂಡಿರುವ ಯೋಜನೆಗಳ ಕಾಮಗಾರಿಯಲ್ಲಿ ಅಪಾರ ಪ್ರಮಾಣದ ಹಣ ದುರ್ಬಳಕೆಯಾಗಿದೆ ಎಂದು ಹೇಳಿದ ಅಥಣಿ ಶಾಸಕ ಲಕ್ಷ್ಮಣ ಸವದಿಯವರು ಅಧಿಕಾರಿಗಳ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದರು.
Published: 31st May 2023 11:46 AM | Last Updated: 31st May 2023 02:32 PM | A+A A-

ಲಕ್ಷ್ಮಣ ಸವದಿ
ಬೆಳಗಾವಿ: ನೀರಾವರಿ ಇಲಾಖೆಯಿಂದ ಕೈಗೆತ್ತಿಕೊಂಡಿರುವ ಯೋಜನೆಗಳ ಕಾಮಗಾರಿಯಲ್ಲಿ ಅಪಾರ ಪ್ರಮಾಣದ ಹಣ ದುರ್ಬಳಕೆಯಾಗಿದೆ ಎಂದು ಹೇಳಿದ ಅಥಣಿ ಶಾಸಕ ಲಕ್ಷ್ಮಣ ಸವದಿಯವರು ಅಧಿಕಾರಿಗಳ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದರು.
ಅಥಣಿಯಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಹೆಸ್ಕಾಂ, ಕಂದಾಯ ಇಲಾಖೆ ಹಾಗೂ ಸಬ್ ರಿಜಿಸ್ಟರ್ ಕಚೇರಿ ಅಧಿಕಾರಿಗಳು ಸಾರ್ವಜನಿಕರಿಗೆ ಸೌಜನ್ಯಯುತವಾಗಿ ಸ್ಪಂದಿಸದಿದ್ದಲ್ಲಿ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.
ಇದೇ ವೇಳೆ ಗ್ರಾಮೀಣ ಭಾಗದ ವಾಣಿಜ್ಯ ಸಂಸ್ಥೆಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ಕೂಡಲೇ ತಡೆಯುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ರಾಜಕೀಯದಲ್ಲಿ ದೂರದೃಷ್ಟಿ, ತಾಳ್ಮೆ ಅಗತ್ಯ, ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರವಿಲ್ಲ: ಲಕ್ಷ್ಮಣ ಸವದಿ
ಅರಣ್ಯ ಇಲಾಖೆಯ ನರ್ಸರಿಗಳಲ್ಲಿರುವ ಸಸಿಗಳನ್ನು ಮಹಾರಾಷ್ಟ್ರದಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಚಟುವಟಿಕೆಯನ್ನು ಕೂಡಲೇ ನಿಲ್ಲಿಸಬೇಕು, ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ರಾಜು ಕಾಗೆ, ಅಥಣಿ ಹಾಗೂ ಕಾಗವಾಡ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.